ಗ್ರಂಥಾಲಯ ಬಳಸಿ ಬುದ್ಧಿಶಕ್ತಿ ಹೆಚ್ಚಿಸಿಕೊಳ್ಳಿ

12 MASKI 01
ಮಸ್ಕಿ ಬಸವೇಶ್ವರ ನಗರದಲ್ಲಿ ನಿರ್ಮಿಸಲಾದ ಗ್ರಂಥಾಲಯವನ್ನು ಶಾಸಕ ಆರ್.ಬಸನಗೌಡ ತುರ್ವಿಹಾಳ ಉದ್ಘಾಟಿಸಿದರು. ಕಾಂಗ್ರೆಸ್ ಪಕ್ಷದ ಗ್ರಾಮೀಣ ಘಟಕದ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ, ಮುಖಂಡರಾದ ಅಂದಾನಪ್ಪ ಗುಂಡಳ್ಳಿ, ದೊಡ್ಡಪ್ಪ, ಪುರಸಭೆ ಸದಸ್ಯರಾದ ಮಲ್ಲಯ್ಯ ಚಿಗರಿ ಇತರರಿದ್ದರು.
Published on

ಮಸ್ಕಿ: ವಿದ್ಯಾರ್ಥಿಗಳು ಜ್ಞಾನವಂತರಾಗಬೇಕಾದರೆ ಪುಸ್ತಕದೊಂದಿಗೆ ಗೆಳೆತನ ಮಾಡಬೇಕು ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ಪಟ್ಟಣದ ಬಸವೇಶ್ವರ ನಗರದಲ್ಲಿ ಗ್ರಂಥಾಲಯವನ್ನು ಸೋಮವಾರ ಉದ್ಘಾಟಿಸಿ ಮಾಡಿ ಮಾತನಾಡಿದರು. ಸರ್ಕಾರ ವಿದ್ಯಾರ್ಥಿಗಳು ಮತ್ತು ಉದ್ಯೋಗ ಆಕಾಂಕ್ಷಿಗಳಿಗಾಗಿ ಹೈಟೆಕ್ ಗ್ರಂಥಾಲಯ ನಿರ್ಮಾಣ ಮಾಡಿದೆ. ಗ್ರಂಥಾಲಯದಲ್ಲಿ ಉತ್ತಮ ಪುಸ್ತಕ ಲಭ್ಯವಿದೆ. ಸಾರ್ವಜನಿಕರು ಪುಸ್ತಕಗಳನ್ನು ಓದುವ ಮೂಲಕ ತಮ್ಮ ಬುದ್ಧಿಶಕ್ತಿ ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.

ಗ್ಯಾರಂಟಿ ಸಮಿತಿಯ ತಾಲೂಕು ಅಧ್ಯಕ್ಷ ಮೈಬೂಬ್ ಸಾಬ್ ಮುದ್ದಾಪುರ್, ಪ್ರಮುಖರಾದ ಮಲ್ಲಯ್ಯ ಮುರಾರಿ, ಆನಂದ ವೀರಾಪುರ,ರಮೇಶ ಕಾಸ್ಲಿ, ಕೃಷ್ಣಚಿಗರಿ, ಶಬ್ಬೀರ್‌ಸಾಬ್ ಚೌದ್ರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net