ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ

Boy Suside+1
Published on

ಹಾವೇರಿ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೊಂಡವಾಡಗಲ್ಲಿಯಲ್ಲಿ ಸೋಮವಾರ ಸಂಭವಿಸಿದೆ.
ರೇಣುಕಸ್ವಾಮಿ ಸದಾನಂದಯ್ಯ ಹಿರೇಮಠ (32) ಮೃತ ವ್ಯಕ್ತಿ.
ಈತ ಚಿಕ್ಕಂದಿನಿಂದಲೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಇದರಿಂದ ಗುಣವಾಗದ ಕಾರಣ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net