ಹಳಿಯಾಳ-ಕೊಲೆಗಾರನಿಗೆ ಜೀವಾವಧಿ ಶಿಕ್ಷೆ

Govind shivaji marathe
Published on

ಕಾರವಾರ:ಕೊಲೆಗಾರನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಶಿರಸಿಯ 1 ನೇ ಅಧಿಕ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಹಳಿಯಾಳದ ಗೋವಿಂದ ಶಿವಾಜಿ ಮರಾಠೆ ಶಿಕ್ಷೆಗೊಳಗಾದ ಅಪರಾಧಿ. ತನ್ನ ತಂದೆಯನ್ನು ನಿಂದಿಸಿದ ಎಂಬ ಕಾರಣಕ್ಕಾಗಿ ನಾರಾಯಣ ಶಿವಪ್ಪ ನಾಯ್ಕ ಅವರನ್ನು ಅಪಹರಿಸಿ, ಹಳಿಯಾಳ ಮಾಗವಾಡ ಸಮೀಪ ಕತ್ತು ಹಿಸುಕಿ ಕೊಲೆ ಮಾಡಿದ್ದ.
ಹಳಿಯಾಳ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಆರ್.ಪುಟ್ಟಸ್ವಾಮಿ ಗೌಡ ಆರೋಪಿಯನ್ನು ಬಂಧಿಸಿ, ತನಿಖೆ ನಡೆಸಿ, ಆರೋಪಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೇಶ ಎಂ.‌ಮಳಗೀಕರ್ ವಾದ ಮಂಡಿಸಿದ್ದರು.
ಶಿರಸಿಯ 1 ನೇ ಅಧಿಕ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶರಾದ ಕಿರಣ ಕಿಣಿ ಅವರು ವಿಚಾರಣೆ ನಡೆಸಿ ಶಿಕ್ಷೆ ಪ್ರಕಟಿಸಿದ್ದಾರೆ. ಅಲ್ಲದೇ ಕೊಲೆಯಾದ ವ್ಯಕ್ತಿಯ ತಾಯಿ ಬದುಕಿದ್ದರೆ ಆಕೆಗೆ 50 ಸಾವಿರ ರೂ.‌ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net