ಜೀವವಿಮೆ ಕುರಿತು ಅರಿವು ಕಾರ್ಯಕ್ರಮ

karyagara
Published on

ಕುಶಾಲನಗರ: ಗುಡ್ಡೆಹೊಸೂರು ಗ್ರಾಮ ಪಂಚಾಯತ್ ಮತ್ತು ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಂಯುಕ್ತ ಆಶ್ರಯದಲ್ಲಿ ಗುಡ್ಡೆಹೊಸೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪ್ರಧಾನಮಂತ್ರಿಯ ಜೀವವಿಮೆ ಕಾರ್ಯಕ್ರಮಗಳ ಬಗ್ಗೆ ಅರಿವು ಮತ್ತು ನೋಂದಣಿ ಕಾರ್ಯಕ್ರಮ ಶನಿವಾರ ಆಯೋಜಿಸಲಾಯಿತು.

ಈ ಸಂದರ್ಭ ಕರ್ನಾಟಕ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ಪ್ರದೀಪ್ ಕುಮಾರ್ ರವರು ಕಾರ್ಯಗಾರದ ಮಹತ್ವದ ಕುರಿತು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ವಹಿಸಿದ್ದರು. ಈ ಸಂದರ್ಭ ಕೂಡಿಗೆ ಯೂನಿಯನ್ ಬ್ಯಾಂಕ್ ತರಬೇತಿ ಸಂಸ್ಥೆಯ ನಿರ್ದೇಶಕ ಪ್ರಕಾಶ್ ಕುಮಾರ್, ಯೂನಿಯನ್ ಬ್ಯಾಂಕ್ ಕುಶಾಲನಗರ ವಿಭಾಗದ ಕೌನ್ಸಿಲರ್ ನಬಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮೇಶ್, ಕಾರ್ಯದರ್ಶಿ ಕುಮಾರಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net