ಸಾಮಾಜಿಕ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲ

kdr2 (1)
Published on

ಕಡೂರು: ಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲಗೊಳ್ಳಲಿದೆ ಎಂದು ಬಾಳೆಹೊನ್ನೂರು ಶ್ರೀರಂಭಾಪುರಿ ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.

ಹುಲಿಕೆರೆಯ ದೊಡ್ಡಮಠದ ಲಿ.ಬಸವರಾಜ ದೇಶೀಕೇಂದ್ರ ಸ್ವಾಮೀಜಿಗಳ ಪುಣ್ಯಾರಾಧನೆ, ಶ್ರೀ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿಯ 80ನೇ ವರ್ಷದ ವರ್ಧಂತಿ ಹಾಗೂ ಶ್ರೀ ಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ ಎರಡನೇ ವರ್ಷದ ಪಟ್ಟಾಧಿಕಾರ ಮಹೋತ್ಸವದ ಧಾರ್ಮಿಕ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಮನುಷ್ಯನಲ್ಲಿ ಆತ್ಮಬಲ ಬೆಳೆಯಲು ಆಧ್ಯಾತ್ಮದ ಹಸಿವು ಅಗತ್ಯ. ಅನಾರೋಗ್ಯಕರ ಸಮಾಜಕ್ಕೆ ಅಡಿಗಲ್ಲು ಇಡುವ ಜನರ ಸಂಖ್ಯೆ ಹೆಚ್ಚಾಗುತ್ತಿದ್ದು, ಮನುಷ್ಯ ಜಾಗೃತಗೊಂಡು ಆದರ್ಶ ಸಂಸ್ಕೃತಿ ಉಳಿವಿಗೆ ಶ್ರಮಿಸಬೇಕಿದೆ. ಸತ್ಯ ಶುದ್ಧ ಕಾಯಕದಿಂದ ಜೀವನ ಸಾರ್ಥಕಗೊಳ್ಳುತ್ತದೆ. ಜೀವ ಶಿವನಾಗಲು, ಅಂಗ ಲಿಂಗವಾಗಲು ಮತ್ತು ಭವಿ ಭಕ್ತನಾಗುವ ಸಾಧನಾ ಮಾರ್ಗವನ್ನು ಬೋಧಿಸಿದ ಶ್ರೀ ಜಗದ್ಗುರು ರೇಣುಕಾಚಾರ್ಯರ ವಿಚಾರ ಧಾರೆಗಳನ್ನು ಯಾರೂ ಮರೆಯುವಂತಿಲ್ಲ ಎಂದರು.

ಮಲ್ಲಿಕಾರ್ಜುನ ಪಂಡಿತಾರಾಧ್ಯ ಸ್ವಾಮೀಜಿ, ಹುಣಸಘಟ್ಟದ ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಬೀರೂರು ರಂಭಾಪುರಿ ಶಾಖಾ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಯಡಿಯೂರು ರೇಣುಕಾ ಶಿವಾಚಾರ್ಯ ಸ್ವಾಮೀಜಿ, ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಎಚ್.ಎಂ ಲೋಕೇಶ್, ಮಹಡಿಮನೆ ಸತೀಶ್, ಜಿಪಂ ಮಾಜಿ ಅಧ್ಯಕ್ಷ ಎ.ಎನ್ ಮಹೇಶ್, ಕಲ್ಮರುಡಪ್ಪ, ಡಾ. ಸಂತೋಷ್, ಮಲ್ಲೇಗೌಡ, ಜಗೀಶ್, ಮಲ್ಲೇಶಪ್ಪ ಹಾಗೂ ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net