ಅತ್ಯಾಚಾರಿಗೆ ಜೀವಾವಧಿ ಶಿಕ್ಷೆ: ಪ್ರೀತಿಯ ನೆಪದಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ

Court
Published on

ಬೆಂಗಳೂರು: ಪ್ರೀತಿಯ ನಾಟಕವಾಡಿ ಮದುವೆ ಆಗುವ ಸೋಗಿನಲ್ಲಿ ಅಪ್ರಾಪ್ತೆಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಒಂದನೇ ತ್ವರಿತ ನ್ಯಾಯಾಲಯ ತೀರ್ಪು ನೀಡಿದೆ.

ಎಲೆಕ್ಟ್ರಾನಿಕ್ ಸಿಟಿಯ ವಿ. ಮಧು ಶಿಕ್ಷಾ ಅಪರಾಧಿ. ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ತಮಿಳುನಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು, ಬಾಲಕಿಯನ್ನು ರಕ್ಷಣೆ ಮಾಡಿ ಮಧುನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ತನಿಖೆ ನಡೆಸಿ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದ್ದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಕೆ.ಎನ್. ರೂಪಾ, ಆರೋಪಿ ಮೇಲಿನ ಆರೋಪ ಸಾಬೀತಾಗಿ ಅಪರಾಧಿ ಎಂದು ಘೋಷಣೆ ಮಾಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಜತೆಗೆ 10 ಸಾವಿರ ರೂ. ದಂಡ ವಿಧಿಸಿದ್ದಾರೆ. ಸರ್ಕಾರದ ಅಭಿಯೋಜಕರಾಗಿ ಪಿ.ಕೃಷ್ಣವೇಣಿ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net