ಬಸವರಾಜ ಮುತ್ತಗಿಗೆ ಜೀವ ಬೆದರಿಕೆ ಕರೆ

28 Dwd muttagi
Published on

ಧಾರವಾಡ: ತಾಲೂಕಿನ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯರಾಗಿದ್ದ ಯೋಗೇಶಗೌಡ ಗೌಡರ ಕೊಲೆ ಪ್ರಕರಣದ ಮಾಫಿ ಸಾಕ್ಷಿ ಆಗಿರುವ ಬಸವರಾಜ ಮುತ್ತಗಿ, ಜೀವ ಬೆದರಿಕೆ ಕರೆ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಕೋರಿ ಗುರುವಾರ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಯೋಗೇಶಗೌಡ ಕೊಲೆ ಪ್ರಕರಣದ 9ನೇ ಆರೋಪಿ ಅಶ್ವತ್ಥ್ ಬುಧವಾರ ರಾತ್ರಿ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಮುತ್ತಗಿ ದೂರಿನಲ್ಲಿ ತಿಳಿಸಿದ್ದಾರೆ. ಬೆದರಿಕೆಯ ಕರೆಯ ಹಿನ್ನೆಲೆಯಲ್ಲಿ ನ್ಯಾಯಾಲಯದ ನಿರ್ದೇಶನದಂತೆ ಮುತ್ತಗಿ ಅವರಿಗೆ ಸಿಆರ್​ಪಿಎಫ್ ಭದ್ರತೆ ಒದಗಿಸಲಾಗಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ, ಬುಧವಾರ ರಾತ್ರಿ 10.30ಕ್ಕೆ ಅಶ್ವತ್ಥ್ ಕರೆ ಮಾಡಿ ಬೆದರಿಸಿದ್ದಾರೆ. ಈ ಸಂಬಂಧ ದೂರು ದಾಖಲಿಸಿದ್ದೇನೆ. ಹಲವರ ಕೈವಾಡ ಇದ್ದು, ನ್ಯಾಯಾಲಯದ ಗಮನಕ್ಕೂ ತರುತ್ತೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net