

ಕುಂದಾಪುರ: ವಿದ್ಯಾರ್ಥಿಗಳಲ್ಲಿ ಸಾವಾಜಿಕ ಜವಾಬ್ದಾರಿ ಮತ್ತು ನಾಯಕತ್ವ ಗುಣಗಳನ್ನು ಬೆಳಸುವ ನಿಟ್ಟಿನಲ್ಲಿ ಈ ಶಿಬಿರವು ಬಹು ಉಪಯೋಗಿಯಾಗಿದೆ. ಪುಸ್ತಕದ ಓದಿಗಿಂತ ಹೆಚ್ಚಾಗಿ ಇಂದು ಇಂತಹ ಅನೇಕ ಶಿಬಿರಗಳು ವಿದ್ಯಾರ್ಥಿಗಳ ಜೀವನ ಮೌಲ್ಯದ ಪಾಠಗಳನ್ನು ಕಲಿಸುತ್ತದೆ ಎಂದು ಕೊರ್ಗಿ ಚಾರಿಟೆಬಲ್ ಟ್ರಸ್ಟ್ ಪ್ರವರ್ತಕ ಕೊರ್ಗಿ ವಿಠಲ್ ಶೆಟ್ಟಿ ಹೇಳಿದರು.
ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಟಕದ ನೇತೃತ್ವದಲ್ಲಿ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ವಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ಮಾತನಾಡಿದರು.
ಕುಂಭಾಶಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆನಂದ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಯರಾಮ್ ಶೆಟ್ಟಿ, ಎಲ್‌ಐಸಿ ನಿವೃತ್ತ ಡಿವಿಜನಲ್ ವ್ಯಾನೇಜರ್ ರವಿರಾಜ್ ಕುಂಭಾಶಿ, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂದ ಪ್ರಧಾನ ಕಾರ್ಯದರ್ಶಿ ಗಣೇಶ್ ಎಸ್.ಬೀಜಾಡಿ, ಶಿಬಿರ ನಿರ್ದೇಶಕ, ಕಾಲೇಜು ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ., ಸಹ ಶಿಬಿರಾಧಿಕಾರಿ ಸುಕೇಶ್ ಚಂದ್ರಶೇಖರ ಉಪಸ್ಥಿತರಿದ್ದರು. ವನಿತಾ ನಾಯ್ಕ ಪ್ರಾಸ್ತಾವಿಸಿದರು. ಪಿ.ಶೇಖರ ನಿರೂಪಿಸಿದರು. ಸುಕೇಶ್ ಚಂದ್ರಶೇಖರ ವಂದಿಸಿದರು.