ಮುತ್ಸಂದ್ರ ಎಂ.ಎ.ಕೃಷ್ಣಾರೆಡ್ಡಿಗೆ ಜೀವಮಾನ ಸಾಧನೆ ಪ್ರಶಸ್ತಿ

ಮುತ್ಸಂದ್ರದ ಎಂ.ಎ.ಕೃಷ್ಣಾರೆಡ್ಡಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ಸಚಿವೆ ಉಮಾಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಹುಲಿಕಲ್ ನಟರಾಜ್, ಆಳಂದ ಶಾಸಕ ಬಿ.ಆರ್. ಪಾಟೀಲ್ ಇದ್ದರು.
ಮುತ್ಸಂದ್ರದ ಎಂ.ಎ.ಕೃಷ್ಣಾರೆಡ್ಡಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ಸಚಿವೆ ಉಮಾಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಹುಲಿಕಲ್ ನಟರಾಜ್, ಆಳಂದ ಶಾಸಕ ಬಿ.ಆರ್. ಪಾಟೀಲ್ ಇದ್ದರು.
Published on

ಹೊಸಕೋಟೆ: ಯಲಹಂಕದ ಬಾಗಲೂರಿನಲ್ಲಿ ಹಮ್ಮಿಜಕೊಂಡಿದ್ದ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ ಮತ್ಸಂದ್ರದ ಎಂ.ಎ ಕೃಷ್ಣಾರೆಡ್ಡಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ಮಾಜಿ ಸಚಿವೆ ಉಮಾಶ್ರೀ, ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಅಧ್ಯಕ್ಷ ಹುಲಿಕಲ್ ನಟರಾಜ್, ಆಳಂದ ಶಾಸಕ ಬಿ.ಆರ್.ಪಾಟೀಲ್ ಪ್ರದಾನ ಮಾಡಿದ್ದಾರೆ. ಮುತ್ಸಂದ್ರ ಎಂಎ.ಕೃಷ್ಣಾರೆಡ್ಡಿ ಅವರು ರಾಜ್ಯ ರೆಡ್ಡಿ ಸಂಘದ ನಿರ್ದೇಶಕರಾಗಿ, ಸಮಾಜಸೇವಕರಾಗಿ ತಮ್ಮದೇ ಆದ ಸೇವೆಯನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದಾರೆ. ಅವರ ಸಾಮಾಜಿಕ ಕಳಕಳಿಯನ್ನು ಗುರುತಿಸಿ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನಿಂದ ಜೀವಮಾನ ಸಾಧನಾ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಪ್ರಶಸ್ತಿಯು 10 ಗ್ರಾಂ ಚಿನ್ನದ ಪದಕದೊಂದಿಗೆ ಪ್ರಮಾಣ ಪತ್ರ ಒಳಗೊಂಡಿದೆ. ಮುತ್ಸಂದ್ರದ ಎಂ.ಎ.ಕೃಷ್ಣಾರೆಡ್ಡಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ಸಚಿವೆ ಉಮಾಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಹುಲಿಕಲ್ ನಟರಾಜ್, ಆಳಂದ ಶಾಸಕ ಬಿ.ಆರ್. ಪಾಟೀಲ್ ಇದ್ದರು. ಮುತ್ಸಂದ್ರದ ಎಂ.ಎ.ಕೃಷ್ಣಾರೆಡ್ಡಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ಸಚಿವೆ ಉಮಾಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಹುಲಿಕಲ್ ನಟರಾಜ್, ಆಳಂದ ಶಾಸಕ ಬಿ.ಆರ್. ಪಾಟೀಲ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net