ಲಿಫ್ಟ್‌ನಲ್ಲಿ ಸಿಲುಕಿದ್ದ ಮೂವರ ರಕ್ಷಣೆ

Lift 9 March 20
Published on

ಮಂಗಳೂರು: ನಗರದ ಮಿನಿ ವಿಧಾನಸೌಧದ ಲಿಫ್ಟ್‌ನಲ್ಲಿ ಸಿಲುಕಿಕೊಂಡ ಮೂವರು ಹಿರಿಯ ನಾಗರಿಕರನ್ನು ಶುಕ್ರವಾರ ಬೆಳಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ.

ಕಚೇರಿ ಕೆಲಸದಲ್ಲಿ ಮಿನಿ ವಿಧಾನಸೌಧಕ್ಕೆ ಬಂದಿದ್ದ ಮೂವರು ಹಿರಿಯ ನಾಗರಿಕರು ಲಿಫ್ಟ್ ಹತ್ತಿದ್ದರು. ಇವರಲ್ಲಿ ಮಹಿಳೆ, ಇಬ್ಬರು ಪುರುಷರಿದ್ದರು. ಇವರು ಲಿಫ್ಟ್ ಏರಿದ ಕೆಲವೇ ಕ್ಷಣಗಳಲ್ಲಿ ಅರ್ಧದಲ್ಲೇ ಸ್ಥಗಿತಗೊಂಡಿದ್ದು, ಗಲಿಬಿಲಿಗೊಂಡಿದ್ದರು.

ವಿಷಯ ತಿಳಿದ ಅಧಿಕಾರಿಗಳು ಪಾಂಡೇಶ್ವರ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಲಿಫ್ಟ್‌ನಲ್ಲಿ ಸಿಲುಕಿದ್ದವರನ್ನು ರಕ್ಷಿಸಿದರು. ತಾಂತ್ರಿಕ ದೋಷದಿಂದ ಲಿಫ್ಟ್ ಕೆಟ್ಟಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net