ದಸರಾದಂತೆ ರಾಜ್ಯೋತ್ಸವಕ್ಕೂ ಅನುದಾನ ನೀಡಲಿ

10 Jaggu 1
Published on

ಬೆಳಗಾವಿ: ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸಬೇಕು. ಅಂಗಡಿ&ಮುಂಗಟ್ಟುಗಳ ನಾಮಫಲಕ ಮತ್ತು ಜಾಹೀರಾತು ಫಲಕಗಳಲ್ಲಿ ಕನ್ನಡ ಬಳಸದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯ ಪುರುಷೋತ್ತಮ ಬಿಳಿಮಲೆ ಅವರನ್ನು ಒತ್ತಾಯಿಸಿದರು.

ನಗರದ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಕನ್ನಡ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಆಗ್ರಹಿಸಿದರು. ನಾಡವಿರೋಧಿ ಚಟುವಟಿಕೆ ಕೈಗೊಳ್ಳುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್​) ನಿಷೇಧಿಸಬೇಕು. ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವಕ್ಕೆ ರಾಜ್ಯ ಸರ್ಕಾರದಿಂದ ಪ್ರತಿವರ್ಷ 2 ಕೋಟಿ ರೂ. ಅನುದಾನ ನೀಡಬೇಕು. ಗಡಿ ಹಿತರಣೆ ಕಾಪಾಡಲು ರಚಿಸಿರುವ ಆಯೋಗ ಮತ್ತು ಪ್ರಾಧಿಕಾರಗಳು ಮೂರು ತಿಂಗಳಿಗೊಮ್ಮೆ ಬೆಳಗಾವಿಯಲ್ಲಿ ಸಭೆ ನಡೆಸಿ, ಕನ್ನಡಿಗರ ಅಹವಾಲು ಕೇಳಬೇಕು ಎಂದು ಒತ್ತಾಯಿಸಿದರು.

ಕನ್ನಡಪರ ಕಚೇರಿ ಆರಂಭಿಸಲಿ: ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ಗಡಿ ಮತ್ತು ನದಿಗಳ ಸಂರಣಾ ಆಯೋಗ ಹಾಗೂ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಪ್ರಾದೇಶಿಕ ಕಚೇರಿ ಆರಂಭಿಸಲು ಸರ್ಕಾರ ಕ್ರಮ ವಹಿಸಬೇಕು. ಕನ್ನಡ ಜಾಗೃತಿ ಸಮಿತಿ ರಚಿಸಿ, ಅದರ ಪದಾಧಿಕಾರಿಗಳಿಗೆ ಕೆಡಿಪಿ ಸಭೆಗಳಿಗೆ ಹಾಜರಾಗಲು ಅವಕಾಶ ನೀಡಬೇಕು ಎಂದು ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಅಶೋಕ ಚಂದರಗಿ ಒತ್ತಾಯಿಸಿದರು.

ರೌಡಿಶೀಟರ್​ ಪ್ರಕರಣ ಹಿಂಪಡೆಯಲಿ: ಗಡಿಯಲ್ಲಿ ಕನ್ನಡಪರ ಹೋರಾಟಗಾರರ ಮೇಲೆ ರೌಡಿಶೀಟರ್​ ಪ್ರಕರಣ ದಾಖಲಿಸಲಾಗುತ್ತಿದೆ. ಕನ್ನಡ ಹೋರಾಟಗಾರರ ಮೇಲೆ ದಾಖಲಿಸಿದ ಪ್ರಕರಣಗಳನ್ನು ರದ್ದುಪಡಿಸಬೇಕು ಎಂದು ಕರವೇ ಜಿಲ್ಲಾಧ್ಯ ದೀಪಕ ಗುಡಗನಟ್ಟಿ ಆಗ್ರಹಿಸಿದರು.

ಸಭೆ ಅಧ್ಯಕ್ಷತೆ ವಹಿಸಿದ್ದ ಪುರುಷೋತ್ತಮ ಬಿಳಿಮಲೆ ಮಾತನಾಡಿ, ಸರ್ಕಾರದ ಗಮನಕ್ಕೆ ತಂದು ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸುತ್ತೇನೆ. ಮುಂಬರುವ ದಿನಗಳಲ್ಲಿ ಕನ್ನಡ ಸಂಟನೆಗಳ ಪದಾಧಿಕಾರಿಗಳ ಜತೆ ಸುದೀರ್ವಾಗಿ ಸಭೆ ನಡೆಸುತ್ತೇವೆ ಎಂದರು. ಪ್ರಾಧಿಕಾರದ ಸದಸ್ಯ ಸಂತೋಷ ಹಾನಗಲ್​ ಮಾತನಾಡಿದರು. ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಅಧ್ಯ ಯಲ್ಲಪ್ಪ ಹಿಮ್ಮಡಿ, ಕನ್ನಡ ಮತ್ತು ಸಂಸತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಮಹಾದೇವ ತಳವಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net