

ಕಿಕ್ಕೇರಿ: ಕಾಂಗ್ರೆಸ್ ಸರ್ಕಾರದಲ್ಲಿ ಅನುದಾನ ಪಡೆಯಲು ಹೋರಾಡುವಂತಾಗಿದೆ ಎಂದು ಶಾಸಕ ಎಚ್.ಟಿ. ಮಂಜು ಹೇಳಿದರು.
ಹೋಬಳಿಯ ತುಳಸಿ ಗ್ರಾಮದಲ್ಲಿ ಶನಿವಾರ ವಿವಿಧ ಯೋಜನೆಗಳ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಮನೆಗಳಿಗೆ ಶುದ್ಧ ಕುಡಿಯುವ ನೀರು ವ್ಯವಸ್ಥೆ ಮಾಡಲು ಮುಂದಾಗಿದೆ. 72ಲಕ್ಷ ರೂ. ಅಂದಾಜು ವೆಚ್ಚದಲ್ಲಿ 200 ಮನೆಗಳಿಗೆ ಶುದ್ಧ ಕುಡಿಯುವ ನೀರು ನೀಡಲಾಗುತ್ತಿದೆ. ಹೊಸದಾಗಿ ಪೈಪ್‌ಲೈನ್ ಅಳವಡಿಸಲಾಗುತ್ತಿದೆ. ಡಾಂಬರು ರಸ್ತೆ ಇದ್ದಲ್ಲಿ ರಸ್ತೆ ಅಗೆದರೆ ಸರಿಪಡಿಸುವುದು ಗುತ್ತಿಗೆದಾರನ ಕರ್ತವ್ಯವಾಗಿದೆ. ಗುಣಮಟ್ಟಕ್ಕೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು.
ಕಾಂಗ್ರೆಸ್ ಸರ್ಕಾರ ಬಿಟ್ಟಿ ಭಾಗ್ಯ ಪೂರೈಸಲು ಪರದಾಡುತ್ತಿದೆ. ಶಾಸಕರಿಗೆ ಅನುದಾನ ಕಲ್ಪಿಸಲು ಕೈಚೆಲ್ಲಿದೆ. ಜನರ ಸಮಸ್ಯೆಗಳನ್ನು ಪರಿಹರಿಸಲು ಹೋರಾಟದ ಹಾದಿ ಹಿಡಿಯಬೇಕಾಗಿದೆ ಎಂದರು.
ಮುಖಂಡರಾದ ಸಿ.ಎನ್.ಪುಟ್ಟಸ್ವಾಮಿಗೌಡ, ಐಕನಹಳ್ಳಿ ಕೃಷ್ಣೇಗೌಡ, ಐನೋರಹಳ್ಳಿ ಮಲ್ಲೇಶ್, ಕಾಯಿ ಮಂಜೇಗೌಡ, ರಮೇಶ್, ರಾಮೇಗೌಡ, ದೇವೇಗೌಡ, ಕಿರಣ್, ಸಚಿನ್, ವಿಶ್ವನಾಥ್ ಇತರರು ಇದ್ದರು.