ಅನ್ನದಾನ, ವಿದ್ಯಾದಾನದಂತೆ ರಕ್ತದಾನ ಶ್ರೇಷ್ಠ ದಾನ

1 ckm 2
ಚಿಕ್ಕಮಗಳೂರಿನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಆಯೋಜಿಸಿದ್ದ ರಾಷ್ಟಿçÃಯ ಸ್ವಯಂ ಪ್ರೇರಿತ ರಕ್ತದಾನ ದಿನವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವಿ.ಹನುಮಂತಪ್ಪ ಉದ್ಘಾಟಿಸಿದರು. ಡಾ. ಮುರಳೀಧರ್, ಡಾ. ಹರೀಶ್ ಬಾಬು, ಜಲಜಾಕ್ಷಿ, ಡಾ. ದೇಶಪಾಂಡೆ ಉಪಸ್ಥಿತರಿದ್ದರು.
Published on

ಚಿಕ್ಕಮಗಳೂರು: ಅನ್ನದಾನ, ವಿದ್ಯಾದಾನದಂತೆ ರಕ್ತದಾನವು ಶ್ರೇಷ್ಠ ದಾನವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವಿ.ಹನುಮಂತಪ್ಪ ತಿಳಿಸಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ ಹಾಗೂ ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆಯ ಆಶ್ರಯದಲ್ಲಿ ಮಂಗಳವಾರ ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಆಯೋಜಿಸಿದ್ದ ರಾಷ್ಟಿçÃಯ ಸ್ವಯಂ ಪ್ರೇರಿತ ರಕ್ತದಾನ ದಿನವನ್ನು ಉದ್ಘಾಟಿಸಿ ಮಾತನಾಡಿದರು.
ಕೃತಕವಾಗಿ ರಕ್ತವನ್ನು ತಯಾರಿಸಲು ಸಾಧ್ಯವಿಲ್ಲ. ಆದ್ದರಿಂದ ರಕ್ತವನ್ನು ಆರೋಗ್ಯವಂತ ವ್ಯಕ್ತಿಯಿಂದ ಪಡೆದು ಮತ್ತೊಬ್ಬರಿಗೆ ದಾನ ಮಾಡಬೇಕಾಗುತ್ತದೆ. ರಕ್ತದಾನ ಮಾಡುವಾಗ ಭಯ, ಆತಂಕ ಬೇಡ. ಒಬ್ಬರು ದಾನ ಮಾಡಿದ ರಕ್ತ ೩ ಜನರ ಜೀವವನ್ನು ಉಳಿಸಲು ಸಹಾಯವಾಗುತ್ತದೆ. ಆದುದರಿಂದ ಪ್ರತಿಯೊಬ್ಬರು ರಕ್ತದಾನ ಮಾಡುವಂತೆ ಹೇಳಿದರು.
ಜಿಲ್ಲಾ ಆಸ್ಪತ್ರೆಯ ರಕ್ತದಾನ ಕೇಂದ್ರದ ವೈದ್ಯಾಧಿಕಾರಿ ಡಾ. ಮುರಳೀಧರ್ ಪ್ರಾಸ್ತಾವಿಕವಾಗಿ ಮಾತನಾಡಿ, ಆರೋಗ್ಯವಂತ ವ್ಯಕ್ತಿಯಿಂದ ಮಾತ್ರ ರಕ್ತವನ್ನು ದಾನ ಪಡೆಯುವುದರಿಂದ ಇಂದಿನ ಯುವಕರು ದುಷ್ಚಟಗಳಿಗೆ ಬಲಿಯಾಗದೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಪ್ರಾಣವನ್ನು ಉಳಿಸಬೇಕು. ರಕ್ತ ಕೇಂದ್ರದಲ್ಲಿ ೦೫ ಖಾಯಿಲೆಗಳಿಗೆ ಪರೀಕ್ಷೆ ಮಾಡಲಾಗುತ್ತದೆ. ರಕ್ತ ಕೇಂದ್ರದಿAದ ದೂರವಾಣಿ ಕರೆ ರಕ್ತ ನೀಡಿದವರಿಗೆ ಬರದಿದ್ದರೆ ಅದೇ ನಿಮಗೆ ಪ್ರಮಾಣ ಪತ್ರವಿದ್ದಂತೆ. ಈ ವರ್ಷದ ಘೋಷ ವಾಕ್ಯವಾದ ೨೦ ವರ್ಷದ ರಕ್ತದಾನದ ಸಂಭ್ರಮ, ಧನ್ಯವಾದ ರಕ್ತದಾನಿಗಳೇ ಹಾಗೂ ನಿಮ್ಮ ಜೀವದಾನದ ಕೊಡುಗೆ ಅತ್ಯಮೂಲ್ಯವಾದದು ಎಂದರು.
ಕಾರ್ಯಕ್ರಮದಲ್ಲಿ ಅತೀ ಹೆಚು ಬಾರಿ ರಕ್ತದಾನ ಮಾಡಿದ ೫ ದಾನಿಗಳಿಗೆ ಮತ್ತು ೫ ಸಂಘ ಸಂಸ್ಥೆಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆಯನ್ನು ನೀಡಿ ಅಭಿನಂದಿಸಿ ಗೌರವಿಸಲಾಯಿತು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಲಜಾಕ್ಷಿ ರಕ್ತದಾನ ಕುರಿತಾದ ಪ್ರಮಾಣ ವಚನವನ್ನು ಬೋಧಿಸಿದರು.
ಕಾರ್ಯಕ್ರಮದ ನಂತರ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದ್ದು ಇಲಾಖೆಯ ಅಧಿಕಾರಿಗಳು, ಕಾಲೇಜಿನ ಪ್ರಾಧ್ಯಾಪಕರುಗಳು ಹಾಗೂ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.
ವೈದ್ಯಕೀಯ ಕಾಲೇಜಿನ ಬಯೋಕೆಮಿಸ್ಟಿçà ವಿಭಾಗದ ಮುಖ್ಯಸ್ಥ ಹಾಗೂ ಪ್ರಾಧ್ಯಾಪಕ ಡಾ. ದೇಶಪಾಂಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ. ಹರೀಶ್ ಬಾಬು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net