ರಿಯಾ ರೀತಿ ಸಂಜನಾಗೂ ಜಾಮೀನು ನೀಡಿ...

Sanjana Actrss
Published on

ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಬಂಧಿತರಾಗಿದ್ದ ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಮುಂಬೈ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸಂಜನಾ ಗಲ್ರಾನಿ ವಿರುದ್ಧದ ಆರೋಪಗಳಿಗೂ ಸಾಕ್ಷ್ಯಾಧಾರಗಳಿಲ್ಲದ ಕಾರಣ ಜಾಮೀನು ನೀಡಬೇಕು ಎಂದು ಸಂಜನಾ ಪರ ವಕೀಲರು ಮನವಿ ಮಾಡಿದ್ದಾರೆ.

ಜಾಮೀನು ಕೋರಿ ಸಂಜನಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಪೀಠ ಗುರುವಾರ ವಿಚಾರಣೆ ನಡೆಸಿತು. ಸಂಜನಾ ಪರ ವಕೀಲ ಹಷ್ಮತ್ ಪಾಷಾ ವಾದ ಮಂಡಿಸಿ, ಅರ್ಜಿದಾರರು ಡ್ರಗ್ಸ್ ಸೇವನೆ ಮಾಡಿಲ್ಲ. ಡ್ರಗ್ಸ್ ಮಾರಾಟ ಹಾಗೂ ಪೂರೈಕೆಯಲ್ಲೂ ತೊಡಗಿಸಿಕೊಂಡಿಲ್ಲ. ಮನೆ ಮೇಲೆ ದಾಳಿ ನಡೆಸಿದಾಗ 1 ಲ್ಯಾಪ್​ಟಾಪ್, 4 ಮೊಬೈಲ್ ಪೋನ್ ವಶಪಡಿಸಿಕೊಳ್ಳಲಾಗಿದೆಯೇ ಹೊರತು ಯಾವುದೇ ಮಾದಕ ವಸ್ತು ದೊರೆತಿಲ್ಲ. ಅವರ ವಿರುದ್ಧ ಯಾವುದೇ ಆರೋಪಗಳಿಗೆ ಸಾಕ್ಷ್ಯಾಧಾರಗಳು ಇಲ್ಲ, ಸಂಜನಾ ವಿರುದ್ಧ ಸುಳ್ಳು ದೂರು ದಾಖಲಿಸಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ವಾದ ಆಲಿಸಿದ ಪೀಠ ವಿಚಾರಣೆಯನ್ನು ಅ.24ಕ್ಕೆ ಮುಂದೂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net