ಕೆಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಲಿಂಗರಾಜ ಚಪ್ಪರದಳ್ಳಿ ಸ್ಪರ್ಧೆ

BJP MEETING HIREKERUR
Published on

ಹಿರೇಕೆರೂರ: ಸೆಪ್ಟೆಂಬರ್ 30ರಂದು ನಡೆಯುವ ಕೆಸಿಸಿ ಬ್ಯಾಂಕಿನ ನಿರ್ದೇಶಕರ ಆಯ್ಕೆ ಚುನಾವಣೆಗೆ ತಾಲೂಕಿನಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯನ್ನಾಗಿ ಲಿಂಗರಾಜ ಚಪ್ಪರದಳ್ಳಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ತಿಳಿಸಿದರು.

ತಾಲೂಕಿನ ಬಾಳಂಬೀಡ ಗ್ರಾಮದ ಗೃಹ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕು ವ್ಯವಸಾಯ ಸೇವಾ ಸಹಕಾರಿ ಸಂಘಗಳ ಅಧ್ಯಕ್ಷರ ಹಾಗೂ ಬಿಜೆಪಿ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

ಲಿಂಗರಾಜ ಚಪ್ಪರದಳ್ಳಿ ಅವರು ಈ ಹಿಂದೆ ಕೆಸಿಸಿ ಬ್ಯಾಂಕಿನ ನಿರ್ದೇಶಕರಾಗಿ ಅತ್ಯುತ್ತಮ ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಕೆಸಿಸಿ ಬ್ಯಾಂಕಿನಲ್ಲಿನ ವಹಿವಾಟು, ವ್ಯವಹಾರದ ಬಗ್ಗೆ ಸಾಕಷ್ಟು ಅನುಭವವಿದೆ. ಪಾರದರ್ಶಕವಾಗಿ ಆಡಳಿತ ನಡೆಸಿರುವ ಹಿನ್ನೆಲೆಯಲ್ಲಿ ಅವರನ್ನು ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂದು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಇವರ ಗೆಲುವಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಶ್ರಮಿಸುವ ಮೂಲಕ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು. ಸೆ. 20ರಂದು ನಾಮಪತ್ರ ಸಲ್ಲಿಸಲಾಗುವುದು ಎಂದರು.

ಲಿಂಗರಾಜ ಚಪ್ಪರದಳ್ಳಿ ಮಾತನಾಡಿ, ಸುಮಾರು 15 ವರ್ಷಗಳಿಂದ ಸಹಕಾರಿ ಕ್ಷೇತ್ರಗಳಲ್ಲಿ ಹಾಗೂ 46 ಸೊಸೈಟಿಯಲ್ಲಿ ಪಕ್ಷಾತೀತವಾಗಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಪ್ರತಿ ಸೊಸೈಟಿ ಅಭಿವೃದ್ಧಿ ಪಡಿಸಲು 50 ಸಾವಿರ ಅನುದಾನವನ್ನು ಕೊಟ್ಟಿದ್ದೇನೆ ಎಂದರು.

ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ಎಸ್. ಪಾಟೀಲ, ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಶಿವಕುಮಾರ ತಿಪ್ಪಶೆಟ್ಟಿ, ಮುಖಂಡರಾದ ಎನ್.ಎಂ. ಈಟೇರ, ಆರ್.ಎನ್. ಗಂಗೋಳ, ಬಿ.ಎನ್. ಬಣಕಾರ, ರವಿಶಂಕರ ಬಾಳಿಕಾಯಿ, ಮಾಲತೇಶ ಗಂಗೋಳ, ಹಾಲನಗೌಡ ಮುದಿಗೌಡ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net