ಮುಳುಗಿದ ಶೀಲಹಳ್ಳಿ ಬ್ರಿಡ್ಜ್

16102020 LINGASUGURU SHILAHALLI BRIDGE
Published on


ಲಿಂಗಸುಗೂರು: ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1.82 ಲಕ್ಷ ಕ್ಯೂಸೆಕ್ ನೀರು ಹರಿಬಿಟ್ಟಿದ್ದರಿಂದ ಪ್ರವಾಹ ಹೆಚ್ಚಿ ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಿದೆ.
ಸದ್ಯ ಸೇತುವೆ ಮೇಲೆ ವಾಹನ ಸಂಚಾರ ಸ್ಥಗಿತಗೊಂಡಿದ್ದು, ನದಿ ತೀರದ ಶೀಲಹಳ್ಳಿ, ಕಡದರಗಡ್ಡಿ, ಯರಗೋಡಿ, ಹಂಚಿನಾಳ ಗ್ರಾಮಗಳ ಸಾರ್ವಜನಿಕರು ಜಲದುರ್ಗ ಮಾರ್ಗವಾಗಿ 45 ಕಿಮೀ. ಸುತ್ತುವರಿದು ತಾಲೂಕು ಕೇಂದ್ರಕ್ಕೆ ಬರುವಂತಾಗಿದೆ.

ಮಹಾರಾಷ್ಟ್ರದಲ್ಲಿ ಹೆಚ್ಚಿನ ಮಳೆ ಸುರಿಯುತ್ತಿದೆ. ಕೊಯ್ನ ಜಲಾಶಯ ಭರ್ತಿಯಾಗಿದ್ದರಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಇದರಿಂದ ಹೊರಬಿಡುತ್ತಿರುವ ನೀರು ಬಸವಸಾಗರ ಜಲಾಶಯಕ್ಕೆ ಬರುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನೀರಿನ ಹೊರಹರಿವು ಹೆಚ್ಚಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net