ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಿ

Lingasugur Appeal
ಲಿಂಗಸುಗೂರು ಎಸಿ ಬಸವಣೆಪ್ಪ ಕಲಶೆಟ್ಟಿಗೆ ರೈತ ಸಂಘದ ಪ್ರಮುಖರು ಮನವಿ ಸಲ್ಲಿಸಿದರು. ಸಂಘದ ಜಿಲ್ಲಾಧ್ಯಕ್ಷ ಶಿವಪುತ್ರಗೌಡ ಪೊಲೀಸ್ ಪಾಟೀಲ್, ತಾಲೂಕು ಅಧ್ಯಕ್ಷ ದುರ್ಗಾ ಪ್ರಸಾದ ಇದ್ದರು.
Published on

ಲಿಂಗಸುಗೂರು: ತಾಲೂಕಿನ ಅಮರೇಶ್ವರ ಸುಕ್ಷೇತ್ರ ವ್ಯಾಪ್ತಿಯ ಅರಣ್ಯ ಇಲಾಖೆ ಪ್ರವಾಸಿ ಮಂದಿರ ಅನೈತಿಕ ಚಟುವಟಿಕೆ ತಾಣವಾಗಿದ್ದು, ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಎಸಿ ಬಸವಣೆಪ್ಪ ಕಲಶೆಟ್ಟಿಗೆ ರೈತ ಸಂಘದ ಮುಖಂಡರು ಸೋಮವಾರ ಮನವಿ ಸಲ್ಲಿಸಿದರು.

ಅರಣ್ಯ ಇಲಾಖೆ ಪ್ರವಾಸಿ ಮಂದಿರ ಗುತ್ತಿಗೆ ಆಧಾರದ ಮೇಲೆ ನಿರ್ವಹಣೆ ಮಾಡಲಾಗುತ್ತಿದ್ದು, ನೌಕರ ನನ್ನೆಸಾಬ್ ಯರಡೋಣ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುತ್ತಿದ್ದಾರೆ. ಇದು ದೇವಸ್ಥಾನಕ್ಕೆ ಬರುವ ಭಕ್ತರಿಗೆ ತೀವ್ರ ಮುಜುಗರ ಪಡುವಂತಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಈ ಹಿಂದೆ ಪ್ರವಾಸಿ ಮಂದಿರದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ವೇಳೆ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದು ಕ್ರಮಕೈಗೊಳ್ಳದೆ ಹಾಗೆಯೇ ಬಿಡಲಾಗಿತ್ತು. ಇದರಲ್ಲಿ ಪ್ರಭಾವಿಗಳು ಮತ್ತು ಅಧಿಕಾರಿಗಳ ಕೈವಾಡವಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ತಕ್ಷಣ ಕ್ರಮಕೈಗೊಂಡು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ರೈತಸಂಘದ ಜಿಲ್ಲಾಧ್ಯಕ್ಷ ಶಿವಪುತ್ರಗೌಡ ಪೊಲೀಸ್ ಪಾಟೀಲ್, ತಾಲೂಕು ಅಧ್ಯಕ್ಷ ದುರ್ಗಾ ಪ್ರಸಾದ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net