

ಲಿಂಗಸುಗೂರು: ಹನ್ನರಡನೇ ಶತಮಾನದಲ್ಲಿ ಬಸವಣ್ಣ ಅನುಭವ ಮಂಟಪ ಸ್ಥಾಪಿಸುವ ಮೂಲಕ ಪ್ರಜಾಪ್ರಭುತ್ವ ಪರಿಕಲ್ಪನೆಯ ಬೀಜ ಬಿತ್ತಿದರು ಎಂದು ಎಸಿ ಬಸವಣೆಪ್ಪ ಕಲಶೆಟ್ಟಿ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಬುಧವಾರ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಜಗಜ್ಯೋತಿ ಬಸವೇಶ್ವರರ 892ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 12 ನೇ ಶತಮಾನದಲ್ಲಿ ಸಮಾಜದಲ್ಲಿನ ಅಸಮಾನತೆ, ಕಂದಾಚಾರ ಶೋಷಣೆ, ಮೌಢ್ಯ, ಜಾತಿ ಭೇದ ತೊಲಗಿಸಲು ವಚನಗಳ ಮೂಲಕ ಸಮಾನತೆ ಸಾರಿದರು. ಲಂಡನ್‌ನಲ್ಲಿ ಬಸವಣ್ಣ ಮೂರ್ತಿ ಸ್ಥಾಪಿಸಲಾಗಿದೆ. ಅಲ್ಲದೆ ಜಗತ್ತಿನ ಅನೇಕ ವಿಶ್ವವಿದ್ಯಾಲಯಗಳಲ್ಲಿ ಬಸವಣ ಕುರಿತು ಅಧ್ಯಯನ ಮಾಡಲಾಗುತ್ತಿದೆ. ಇಂತಹ ಮಹಾನ್ ದಾರ್ಶನಿಕ, ಸಮಾಜ ಸುಧಾರಕರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸುಸಂಸ್ಕೃತ ಶ್ರೇಷ್ಠ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.