ಕನ್ನಡ ನಾಡು-ನುಡಿಯ ಕಾಳಜಿ ಇರಲಿ

LNG 4
ಲಿಂಗಸುಗೂರಿನಲ್ಲಿ ಕಸಾಪ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭೂಪನಗೌಡ ಕರಡಕಲ್ಲ ಉದ್ಘಾಟಿಸಿದರು. ಜಿಲ್ಲಾ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಪಾಮಯ್ಯ ಮುರಾರಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಸವರಾಜಗೌಡ ಗಣೇಕಲ್, ಜಿಪಂ ಮಾಜಿ ಅಧ್ಯಕ್ಷ ಗುಂಡಪ್ಪ ನಾಯಕ, ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಹಾಜಿಬಾಬು ಕಲ್ಯಾಣಿ ಇತರರಿದ್ದರು.
Published on

ಲಿಂಗಸುಗೂರು: ಯುವಕರು ಮೊಬೈಲ್ ಗೀಳು ಬಿಟ್ಟು ಕನ್ನಡ ಪುಸ್ತಕಗಳನ್ನು ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭೂಪನಗೌಡ ಕರಡಕಲ್ಲ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ಕಸಾಪ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಹಾಗೂ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಕನ್ನಡ ನಾಡು, ನುಡಿ ಬಗ್ಗೆ ಎಲ್ಲರಲ್ಲೂ ಕಾಳಜಿ ಇರಬೇಕು.

ಕಸಾಪ ತಾಲೂಕು ಘಟಕವು ಮೊದಲಿನಿಂದಲೂ ಕ್ರಿಯಾಶೀಲವಾಗಿದ್ದು, ಈವರೆಗೆ ತಾಲೂಕಿನಲ್ಲಿ ಎರಡು ಜಿಲ್ಲಾ ಸಮ್ಮೇಳನ, ಮೂರು ತಾಲೂಕು ಸಮ್ಮೇಳನ ಆಯೋಜಿಸಿ ಸಾಹಿತ್ಯ, ಸಾಂಸ್ಕೃತಿಕ ವಿಚಾರಗಳನ್ನು ಪಸರಿಸಿದೆ. ತಾಲೂಕು ಸಮ್ಮೇಳನ ಆಯೋಜಿಸುವುದಾದರೆ ಎಲ್ಲ ರೀತಿಯಿಂದ ಸಹಾಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಕಸಾಪ ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ ಅವರು ನೂತನ ಅಧ್ಯಕ್ಷ ಡಾ.ಮಹಾದೇವಪ್ಪ ನಾಗರಾಳಗೆ ಕನ್ನಡ ಧ್ವಜ ನೀಡಿ ಅಧಿಕಾರ ಹಸ್ತಾಂತರಿಸಿದರು. ನಂತರ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು. ಸಾಹಿತಿ ಡಾ.ಕೆ.ಶಶಿಕಾಂತ, ಪ್ರಗತಿಪರ ಸಾಹಿತ್ಯ ಕುರಿತು ಉಪನ್ಯಾಸ ನೀಡಿದರು.

ಜಿಲ್ಲಾ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಪಾಮಯ್ಯ ಮುರಾರಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಸವರಾಜಗೌಡ ಗಣೇಕಲ್, ಜಿಪಂ ಮಾಜಿ ಅಧ್ಯಕ್ಷ ಗುಂಡಪ್ಪ ನಾಯಕ, ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಹಾಜಿಬಾಬು ಕಲ್ಯಾಣಿ, ಮುಖಂಡರಾದ ಡಿ.ಜಿ.ಗುರಿಕಾರ, ಎಂಎಸ್ ನಾಡಗೌಡ ವಕೀಲರು, ಹಾಜಿ ಮಲಂಗಬಾಬಾ, ಉಪನ್ಯಾಸಕ ಡಾ.ಹನುಮಂತಪ್ಪ ಡಾ.ಸಂಗನಗೌಡ ಪಾಟೀಲ್, ಚುಸಾಪ ಅಧ್ಯಕ್ಷ ದುರ್ಗಾಸಿಂಗ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಹಂದ್ರಾಳ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net