ನಿಷ್ಠೆಯಿಂದ ಕಲಿತು ಪ್ರತಿಭಾವಂತರಾಗಿ

lng-1
ಲಿಂಗಸುಗೂರು ಸರ್ಕಾರಿ ಉರ್ದು ಶಾಲೆಯಲ್ಲಿ ಜಿಲ್ಲಾ ಮಟ್ಟದ ಮೌಲಾನಾ ಆಜಾದ್ ಮಾದರಿ ಶಾಲಾ ಕಟ್ಟಡದ ಭೂಮಿ ಪೂಜೆಯನ್ನು ಶಾಸಕ ಮಾನಪ್ಪ ವಜ್ಜಲ್ ನೆರವೇರಿಸಿದರು. ನಯೋಪ್ರಾ ಅಧ್ಯಕ್ಷ ಭೂಪನಗೌಡ ಪಾಟೀಲ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ಪಾಮಯ್ಯ ಮುರಾರಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಸನಗೌಡ ಮೇಟಿ, ಟಿಎಪಿಎಂಎಸ್ ಅಧ್ಯಕ್ಷ ಶಶಿಧರ ಪಾಟೀಲ್ ಆಶಿಹಾಳ, ಪ್ರಭಾರ ಬಿಇಒ ಹನಮಂತಪ್ಪ ಕುಳಗೇರಿ ಇತರರಿದ್ದರು.
Published on

ಲಿಂಗಸುಗೂರು: ಖಾಸಗಿ ಶಾಲೆಗಳಲ್ಲಿ ಹೆಚ್ಚಿನ ಶುಲ್ಕ ಪಡೆದು ವಿದ್ಯಾರ್ಥಿಗಳಿಗೆ ಸೌಕರ್ಯ ನೀಡಲಾಗುತ್ತದೆಂಬ ಭಾವನೆ ಜನರಲ್ಲಿದೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ಅನೇಕ ಸವಲತ್ತುಗಳನ್ನು ಒದಗಿಸಲಾಗುತ್ತಿದೆ ಎಂದು ಶಾಸಕ ಮಾನಪ್ಪ ವಜ್ಜಲ್ ಹೇಳಿದರು.

ಪಟ್ಟಣದ ಸರ್ಕಾರಿ ಉರ್ದು ಶಾಲಾ ಆವರಣದಲ್ಲಿ ರಾಜೀವಗಾಂಧಿ ವಸತಿ ನಿಗಮದಿಂದ ಕೈಗೊಂಡಿರುವ ಜಿಲ್ಲಾ ಮಟ್ಟದ ಮೌಲಾನಾ ಆಜಾದ್ ಮಾದರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಭಾನುವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ರಾಜ್ಯ ಮತ್ತು ಕೇಂದ್ರ ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡಿ ಸಾಕಷ್ಟು ಅನುದಾನ ಒದಗಿಸುತ್ತಿವೆ. ಸುಸಜ್ಜಿತ ಶಾಲಾ ಕೊಠಡಿಗಳು, ಶಿಷ್ಯವೇತನ, ಬಿಸಿಯೂಟ, ಸಮವಸ್ತ್ರ, ಶೂ ಮತ್ತು ಸಾಕ್ಸ್ ನೀಡಿ ಖಾಸಗಿ ಶಾಲೆಗಳ ಸರಿಸಮ ಮೂಲ ಸೌಕರ್ಯ ಒದಗಿಸುತ್ತಿದೆ. ಹೀಗಾಗಿ ಶಿಕ್ಷಣದಿಂದ ಯಾವುದೇ ಮಕ್ಕಳು ವಂಚಿತರಾಗಬಾರದು. ಗುರುಗಳು ಹೇಳಿದ ಪಾಠ ನಿಷ್ಠೆಯಿಂದ ಕಲಿತು ಪ್ರತಿಭಾವಂತರಾಗಬೇಕು. ಶಿಕ್ಷಕರು, ತಂದೆ-ತಾಯಿಗೆ ಕೀರ್ತಿ ತರಬೇಕು ಎಂದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭೂಪನಗೌಡ ಪಾಟೀಲ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಪಾಮಯ್ಯ ಮುರಾರಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಸನಗೌಡ ಮೇಟಿ, ಟಿಎಪಿಎಂಎಸ್ ಅಧ್ಯಕ್ಷ ಶಶಿಧರ ಪಾಟೀಲ್ ಆಶಿಹಾಳ, ಪ್ರಭಾರ ಬಿಇಒ ಹನಮಂತಪ್ಪ ಕುಳಗೇರಿ, ಬಿಜೆಪಿ ಮಂಡಲ ಅಧ್ಯಕ್ಷ ಅಯ್ಯಪ್ಪ ಮಾಳೂರು, ಪ್ರಮುಖರಾದ ಷಡಕ್ಷರಿ ಹಾದಿಮನಿ, ಗಿರಿಮಲ್ಲನಗೌಡ ಪಾಟೀಲ್, ಜೀವಲಪ್ಪ ನಾಯಕ, ನಾರಾಯಣಪ್ಪ ರಾಠೋಡ, ಪೌಲ್ ಜಾನ್ಸನ್, ಅಬ್ದುಲ್ ಬೇಕರಿ, ಕೆ.ನಾಗಭೂಷಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net