

ಲಿಂಗಸುಗೂರು: ತಾಲೂಕಿನ ರೋಡಲಬಂಡಾ (ಯುಕೆಪಿ), ರೋಡಲಬಂಡಾ ಮತ್ತು ಹಿರೇಜಾವೂರ್ ಗ್ರಾಮಗಳಲ್ಲಿ ಕೆಕೆಆರ್‌ಡಿಬಿ 2023-24 ನೇ ಸಾಲಿನ 5 ಲಕ್ಷ ರೂ. ವೆಚ್ಚದಲ್ಲಿ ಅಳವಡಿಸಿರುವ ಹೈಮಾಸ್ಟ್ ದೀಪಗಳನ್ನು ಎಂಎಲ್‌ಸಿ ಶರಣಗೌಡ ಪಾಟೀಲ್ ಬಯ್ಯಪುರ ಮಂಗಳವಾರ ಉದ್ಘಾಟಿಸಿದರು.
ತಾಲೂಕಿನ ಗಡ್ಡಿ ಗದ್ದೆಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ ನೂರಾರು ಭಕ್ತರು ಆಗಮಿಸಲಿದ್ದಾರೆ. ಹೀಗಾಗಿ ತುರ್ತಾಗಿ ಹೈಮಾಸ್ಟ್ ದೀಪಗಳನ್ನು ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ ಸಿಸಿ ರಸ್ತೆ, ಸಮುದಾಯ ಭವನ, ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ಬಿಡುಗಡೆಗೆ ಆದ್ಯತೆ ನೀಡಲಾಗುವುದು ಎಂದು ಶರಣಗೌಡ ಪಾಟೀಲ್ ಬಯ್ಯಪುರ ತಿಳಿಸಿದರು.