ಭಯಮುಕ್ತ ವಾತಾವರಣ ನಿರ್ಮಿಸಿ

Untitled design 06
Published on

ಲಿಂಗಸುಗೂರು: ವಾರಣಾಸಿಯಲ್ಲಿ ವಿದ್ಯಾರ್ಥಿನಿ ಮೇಲೆ 7 ದಿನಗಳ ಕಾಲ ನಡೆದ ಸಾಮೂಹಿಕ ಅತ್ಯಾಚಾರ ನಡೆಸಿದ ಅಪರಾಧಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಲು ಒತ್ತಾಯಿಸಿ ಸಿಪಿಐ (ಎಂಎಲ್) ರೆಡ್ ಸ್ಟಾರ್ ಹಾಗೂ ಅಖಿಲ ಭಾರತ ಕ್ರಾಂತಿಕಾರಿ ಮಹಿಳಾ ಸಂಘಟನೆ ಸದಸ್ಯರು ಎಸಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿನಿಗೆ ಅಗತ್ಯವಾದ ದೈಹಿಕ ಮತ್ತು ಮಾನಸಿಕ ಚಿಕಿತ್ಸೆಯನ್ನು ಒದಗಿಸಬೇಕು. ಜತೆಗೆ ಅವಳ ಕ್ರೀಡೆಗೆ ಹೆಚ್ಚಿನ ಸಹಕಾರ ನೀಡಬೇಕು. ಹೆಚ್ಚುತ್ತಿರುವ ಅತ್ಯಾಚಾರ ಅಪರಾಧಗಳನ್ನು ನಿಲ್ಲಿಸಬೇಕು. ಮಹಿಳೆಯರಿಗೆ ಭಯಮುಕ್ತ ವಾತಾವರಣ ಸೃಷ್ಟಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net