28 ರಂದು ಬ್ರಹ್ಮಶ್ರೀ ನಾರಾಯಣ ಗುರು ಭವನ ಉದ್ಘಾಟನೆ

26112022 lingasugur y v eliger
Published on

ಲಿಂಗಸುಗೂರು: ಪಟ್ಟಣದ ಆರ್ಯ ಈಡಿಗ ಬಡಾವಣೆಯಲ್ಲಿ ಆರ್ಯ ಈಡಿಗ ಸಮಾಜ ಸಂಘ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಟ್ರಸ್ಟ್‌ನಿಂದ ನಿರ್ಮಿಸಿರುವ ಬ್ರಹ್ಮಶ್ರೀ ನಾರಾಯಣ ಗುರು ಭವನದ ಉದ್ಘಾಟನೆ ಕಾರ್ಯಕ್ರಮ ನ.28 ರಂದು ನಡೆಯಲಿದೆ ಎಂದು ನಿವೃತ್ತ ಪ್ರಾಚಾರ್ಯ ವೈ.ವೈ.ಈಳಿಗೇರ ಹೇಳಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೆಂಗಳೂರಿನ ವಿಖ್ಯಾತಾನಂದ ಸ್ವಾಮೀಜಿ, ಶಿವಮೊಗ್ಗದ ರೇಣುಕಾನಂದ ಸ್ವಾಮೀಜಿ, ನಿಪ್ಪಾಣಿಯ ಅರುಣಾನಂದ ತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಚಿವರಾದ ವಿ.ಸುನೀಲ್ ಕುಮಾರ, ಕೋಟಾ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ, ಸಂಸದರು, ಶಾಸಕರು, ಮಾಜಿ ಶಾಸಕರು, ಸಂಘದ ಅಧ್ಯಕ್ಷ ತಿಮ್ಮೇಗೌಡ, ಎಂಎಸ್‌ಐಎಲ್ ಅಧ್ಯಕ್ಷ ಹರತಾಳ ಹಾಲಪ್ಪ ಇತರರು ಭಾಗವಹಿಸಲಿದ್ದಾರೆಂದು ಹೇಳಿದರು. ಸಂಘದ ತಾಲೂಕು ಅಧ್ಯಕ್ಷ ವೆಂಕಟೇಶಪ್ಪ ಗುತ್ತೇದಾರ, ಟ್ರಸ್ಟ್ ಅಧ್ಯಕ್ಷ ಚಂದ್ರಪ್ಪ ಗುತ್ತೇದಾರ, ರಾಮಯ್ಯ ಗುತ್ತೇದಾರ, ಸೋಮಲಿಂಗಪ್ಪ ಗುತ್ತೇದಾರ, ಶಿವಯ್ಯ ಗುತ್ತೇದಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net