ಮೂಲಭೂತ ಕರ್ತವ್ಯಗಳ ಪಾಲನೆ ಮಾಡಿ

lng-1
ಲಿಂಗಸುಗೂರಿನಲ್ಲಿ ಎಸಿ ಬಸವಣೆಪ್ಪ ಕಲಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.ಶಾಸಕ ಮಾನಪ್ಪ ವಜ್ಜಲ್, ಪುರಸಭೆ ಅಧ್ಯಕ್ಷ ಬಾಬೂರಡ್ಡಿ ಮುನ್ನೂರು, ಎಪಿಎಂಸಿ ಅಧ್ಯಕ್ಷ ಅಮರೇಶ ಹಿರೇಹೆಸರೂರು, ತಹಸೀಲ್ದಾರ್ ಶಂಶಾಲಂ, ತಾಪಂ ಇಒ ಉಮೇಶ ಇತರರಿದ್ದರು.
Published on

ಲಿಂಗಸುಗೂರು: ಡಾ.ಅಂಬೇಡ್ಕರ್ ಅವರು ರಾಷ್ಟ್ರಕ್ಕೆ ಸಮರ್ಪಿಸಿದ ಸಂವಿಧಾನದ ಆಶಯದಂತೆ ಮೂಲಭೂತ ಹಕ್ಕುಗಳ ಪಡೆಯುವುದರ ಜತೆಗೆ ಅದರ ಕರ್ತವ್ಯಗಳನ್ನು ನಾವು ಕಡ್ಡಾಯವಾಗಿ ಪಾಲಿಸಬೇಕು ಎಂದು ಎಸಿ ಬಸವಣೆಪ್ಪ ಕಲಶೆಟ್ಟಿ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ತಾಲೂಕು ಆಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಜ.26 ರಂದು ಕಾರ್ಯರೂಪಕ್ಕೆ ತಂದಿರುವ ಸಂವಿಧಾನ ಮೂಲಭೂತ ಹಕ್ಕುಗಳ ಕುರಿತು ಪ್ರತಿಪಾದಿಸುತ್ತದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮೂಲಭೂತ ಹಕ್ಕುಗಳ ಸಮರ್ಪಕವಾಗಿ ದೊರೆಯುವ ಉದ್ದೇಶದಿಂದ ಸರ್ಕಾರದ ವಿವಿಧ ಇಲಾಖೆಗಳು ಜಾಗೃತಿ ಮೂಡಿಸುತ್ತಿವೆ. ಮೂಲಭೂತ ಕರ್ತವ್ಯಗಳನ್ನೂ ನಾವೆಲ್ಲ ಪಾಲಿಸಿದರೆ ರಾಷ್ಟ್ರವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಬಹುದು ಎಂದರು.

ಶಾಸಕ ಮಾನಪ್ಪ ವಜ್ಜಲ್, ಪುರಸಭೆ ಅಧ್ಯಕ್ಷ ಬಾಬೂರಡ್ಡಿ ಮುನ್ನೂರು, ಎಪಿಎಂಸಿ ಅಧ್ಯಕ್ಷ ಅಮರೇಶ ಹಿರೇಹೆಸರೂರು, ತಹಸೀಲ್ದಾರ್ ಶಂಶಾಲಂ, ತಾಪಂ ಇಒ ಉಮೇಶ, ಡಿವೈಎಸ್ಪಿ ದತ್ತಾತ್ರೇಯ ಕರ್ನಾಡ್, ಟಿಎಚ್‌ಒ ಡಾ.ಅಮರೇಶ ಪಾಟೀಲ್, ಬಿಇಒ ಹುಂಬಣ್ಣ ರಾಠೋಡ್, ಪಶು ಸಂಗೋಪನಾ ಇಲಾಖೆ ಅಧಿಕಾರಿ ಡಾ.ರಾಚಪ್ಪ, ಎಸ್ಟಿ ಇಲಾಖೆ ಅಧಿಕಾರಿ ಮಂಜುಳಾ, ಅಬಕಾರಿ ಇಲಾಖೆ ಮಹ್ಮದ್ ಖಾಜಾಹುಸೇನ್ ಇತರರಿದ್ದರು.

ಫೋಟೋ: 26ಎಲ್‌ಎನ್‌ಜಿ01

ಲಿಂಗಸುಗೂರಿನಲ್ಲಿ ಎಸಿ ಬಸವಣೆಪ್ಪ ಕಲಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.ಶಾಸಕ ಮಾನಪ್ಪ ವಜ್ಜಲ್, ಪುರಸಭೆ ಅಧ್ಯಕ್ಷ ಬಾಬೂರಡ್ಡಿ ಮುನ್ನೂರು, ಎಪಿಎಂಸಿ ಅಧ್ಯಕ್ಷ ಅಮರೇಶ ಹಿರೇಹೆಸರೂರು, ತಹಸೀಲ್ದಾರ್ ಶಂಶಾಲಂ, ತಾಪಂ ಇಒ ಉಮೇಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net