ಬ್ಲಾಕ್ ಕಾಂಗ್ರೆಸ್ ಕಚೇರಿ ಸ್ಥಳಾಂತರಿಸಲು ಜಿಲ್ಲಾ ಸಮಿತಿ ಉಪಾಧ್ಯಕ್ಷ ನಾಗನಗೌಡ ತುರಡಗಿ ಆಗ್ರಹ

Naganagouda Turadagi
ನಾಗನಗೌಡ ತುರಡಗಿ.
Published on

ಲಿಂಗಸುಗೂರು: ಪಟ್ಟಣದಲ್ಲಿ ಶಾಸಕ ಡಿ.ಎಸ್.ಹೂಲಗೇರಿ ಅವರ ನಿವಾಸದಲ್ಲೇ ಬ್ಲಾಕ್ ಕಾಂಗ್ರೆಸ್ ಕಚೇರಿ ಇದ್ದು, ಪಕ್ಷದ ಕೆಲ ಮುಖಂಡರು, ಕಾರ್ಯಕರ್ತರು ಮತ್ತು ಟಿಕೆಟ್ ಆಕಾಂಕ್ಷಿಗಳಿಗೆ ಮುಜುಗರವಾಗುತ್ತಿದೆ. ಇದರಿಂದಾಗಿ ಕೂಡಲೇ ಕಚೇರಿಯನ್ನು ಬೇರೆಡೆ ಆರಂಭಿಸಬೇಕೆಂದು ಪಕ್ಷದ ಜಿಲ್ಲಾ ಉಪಾಧ್ಯಕ್ಷ ನಾಗನಗೌಡ ತುರಡಗಿ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದರು. ಶಾಸಕ ಡಿ.ಎಸ್.ಹೂಲಗೇರಿ ನಿವಾಸದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಇರುವುದರಿಂಧ ಪಕ್ಷದ ಬಹುತೇಕ ಕಾರ್ಯಕರ್ತರು ಅಲ್ಲಿಗೆ ಹೋಗುವುದಿಲ್ಲ. ಹೀಗಾಗಿ ರಾಜ್ಯ ಹಾಗೂ ಜಿಲ್ಲಾ ಸಮಿತಿಯ ನಿರ್ದೇಶನಗಳು ಕಾರ್ಯಕರ್ತರಿಗೆ ತಿಳಿಯುತ್ತಿಲ್ಲ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ವಸಂತ ಕುಮಾರ, ಶಾಸಕ ಡಿ.ಎಸ್.ಹೂಲಗೇರಿ ಮುಂದಿನ ಅಭ್ಯರ್ಥಿ ಎಂದು ಹೇಳಿಕೆ ನೀಡಿರುವುದು ಸಮಂಜಸವಲ್ಲ. ಯಾರಿಗೆ ಟಿಕೆಟ್ ನೀಡಬೇಕೆಂದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net