ಬಸ್ ನಿಲ್ದಾಣದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಒತ್ತಾಯ

MANAVI
ಲಿಂಗಸುಗೂರು ಸಾರಿಗೆ ಘಟಕದ ವ್ಯವಸ್ಥಾಪಕ ಆರ್.ವೈ.ಹೊನಸೂರೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶನಿವಾರ ಮನವಿ ಸಲ್ಲಿಸಿದರು. ಕರವೇ ತಾಲೂಕು ಅಧ್ಯಕ್ಷ ಮಾದೇಶ ಸರ್ಜಾಪುರ, ಗೌರವಾಧ್ಯಕ್ಷ ರಮೇಶ ಸುಂಕದ್, ಉಪಾಧ್ಯಕ್ಷ ಬಸವರಾಜ ಪೇರಿ, ಸಂ.ಕಾರ್ಯದರ್ಶಿ ಮುತ್ತಣ್ಣ ಗುಡಿಹಾಳ, ನಗರ ಘಟಕದ ಅಧ್ಯಕ್ಷ ರಾಜು ರಡ್ಡಿ ಇತರರಿದ್ದರು.
Published on

ಲಿಂಗಸುಗೂರು: ಪಟ್ಟಣದ ಬಸ್ ನಿಲ್ದಾಣದಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕಾರ್ಯಕರ್ತರು ಸಾರಿಗೆ ಘಟಕದ ವ್ಯವಸ್ಥಾಪಕ ಆರ್.ವೈ.ಹೊನಸೂರೆಗೆ ಶನಿವಾರ ಮನವಿ ಸಲ್ಲಿಸಿದರು.

ನಿಲ್ದಾಣದಲ್ಲಿ ಕುಡಿವ ನೀರು, ಉಪಹಾಸ ಮಂದಿರ, ಮಹಿಳಾ ಮತ್ತು ಪುರುಷರ ಪ್ರತ್ಯೇಕ ಶೌಚಗೃಹವಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಆವರಣದ ಕಾಂಪೌಂಡ್ ಗೋಡೆಗೆ ಮೂತ್ರ ವಿಸರ್ಜನೆ ಮಾಡುತ್ತಿದ್ದು, ಇದರ ದುರ್ವಾಸನೆಯಿಂದ ಪ್ರಯಾಣಿಕರು ಮೂಗು ಮುಚ್ಚಿಕೊಂಡು ಕುಳಿತುಕೊಳ್ಳುವಂತಾಗಿದೆ. ಸಿಸಿ ಕ್ಯಾಮರಾ ಅಳವಡಿಸದ ಕಾರಣ ರಾತ್ರಿ ವೇಳೆ ಮಹಿಳೆಯರಿಗೆ ಕಳ್ಳಕಾಕರ ಭಯ ಉಂಟಾಗಿದೆ. ಕೂಡಲೇ ಮೂಲ ಸೌಕರ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಕರವೇ ತಾಲೂಕು ಅಧ್ಯಕ್ಷ ಮಾದೇಶ ಸರ್ಜಾಪುರ, ಗೌರವಾಧ್ಯಕ್ಷ ರಮೇಶ ಸುಂಕದ್, ಉಪಾಧ್ಯಕ್ಷ ಬಸವರಾಜ ಪೇರಿ, ಸಂ.ಕಾರ್ಯದರ್ಶಿ ಮುತ್ತಣ್ಣ ಗುಡಿಹಾಳ, ನಗರ ಘಟಕದ ಅಧ್ಯಕ್ಷ ರಾಜು ರಡ್ಡಿ, ಜೀವಾ ನಾಯ್ಕ, ಬಸವರಾಜ, ಗಂಗಾಧರ, ಜಗನ್ನಾಥ ಜಾಧವ್, ಪ್ರಕಾಶ ಮಡ್ಡಿಕಾರ, ತಿಪ್ಪಣ್ಣ ಸರ್ಜಾಪುರ, ರಾಘವೇಂದ್ರ ನಾಯಕ, ಮಂಜುನಾಥ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net