

ಲಿಂಗಸುಗೂರು: ದೇಶದ ಬಹುತೇಕ ರಾಜಕೀಯ ಪಕ್ಷಗಳು ಭ್ರಷ್ಟಾಚಾರದಲ್ಲಿ ತೊಡಗಿವೆ. ಹೀಗಾಗಿ ಶ್ರೀಸಾಮಾನ್ಯರಿಗೆ ಸ್ಪಂದಿಸುವ, ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸಲು ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುವಂತೆ ಎಎಪಿ ರಾಜ್ಯ ಉಪಾಧ್ಯಕ್ಷ ವಿಜಯ ಶರ್ಮಾ ಮನವಿ ಮಾಡಿದರು.
ಪಟ್ಟಣದ ಬಸವಸಾಗರ ವೃತ್ತದ ಬಳಿ ಎಎಪಿ ಕಚೇರಿ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ಆಡಳಿತಾವಧಿಯಲ್ಲಿ ನಡೆದ ಭ್ರಷ್ಟಾಚಾರವನ್ನು ನಾಡಿನ ಜನತೆ ಕಂಡಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಪಕ್ಷವೆಂದು ದೆಹಲಿಯಲ್ಲಿ ಗುರುತಿಸಿಕೊಂಡ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತಿದೆ. ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸಲು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಬೆಂಬಲಿಸುವಂತೆ ಕೋರಿದರು.