ಅಪರಾಧ ತಡೆಯಲು ಸಹಕರಿಸಿ

Lingasugur Anti-Human Trafficking Day
ಲಿಂಗಸುಗೂರಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶೋಷಿತ ಮಹಿಳೆಯರ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಜೆಎಂಎಫ್‌ಸಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ ಉದ್ಘಾಟಿಸಿದರು. ಲಿಂಗಸುಗೂರು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಭೂಪನಗೌಡ ಪಾಟೀಲ್, ಗ್ರೇಡ್-2 ತಹಸೀಲ್ದಾರ ಬಸವರಾಜ ಜಳಿಕಿಮಠ, ಪಿಎಸ್‌ಐ ರತ್ನಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಹುಂಬಣ್ಣ ರಾಠೋಡ ಇದ್ದರು.
Published on

ಲಿಂಗಸುಗೂರು: ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಶೋಷಣೆ ಪ್ರಕರಣಗಳ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಜೆಎಂಎಫ್‌ಸಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ ಹೇಳಿದರು.

ಸ್ಥಳೀಯ ತಾಪಂ ಸಭಾಂಗಣದಲ್ಲಿ ರಾಜ್ಯ ಮಹಿಳಾ ಆಯೋಗ ತಾಲೂಕು ಕಾನೂನು ಸೇವಾ ಸಮಿತಿ ತಾಲೂಕು ವಕೀಲರ ಸಂಘ, ತಾಲೂಕು ಆಡಳಿತ, ಪೊಲೀಸ್, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಾಗೂ ಬೀದರ ಗೌರಮ್ಮ ಅಭಿವೃದ್ಧಿ ಸಂಸ್ಥೆ ಜಂಟಿಯಾಗಿ ಗುರುವಾರ ಶೋಷಿತ ಮಹಿಳೆರಿಗಾಗಿ ಹಾಗೂ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ಅಪರಾಧ ಪ್ರಕರಣ ತಡೆಯಲು ಅಂಗನವಾಡಿ ಕಾರ್ಯಕರ್ತರ ಪಾತ್ರ ಬಹುಮುಖ್ಯ. ಪ್ರಕರಣಗಳು ನಡೆಯದಂತೆ ಪ್ರತಿಯೊಬ್ಬರೂ ಕಾರ್ಯೊನ್ಮುಖರಾಗಬೇಕಿದೆ ಎಂದರು.

ಜೆಎಂಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ಅಂಬಣ್ಣ ಮಾತನಾಡಿ, ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಹಾಗೂ ಮಾನವ ಕಳ್ಳಸಾಗಾಣಿಕೆ ಸಂಪೂರ್ಣವಾಗಿ ತಡೆಯಲು ಸಾರ್ವಜನಿಕರು ಸಹಕಾರ ಅಗತ್ಯವಾಗಿದೆ ಎಂದರು. ಅಧ್ಯಕ್ಷತೆವಹಿಸಿ ತಾಪಂ ಇಒ ಅಮರೇಶ ಯಾದವ ಮಾತನಾಡಿ, ಮಹಿಳೆಯರಿಗಾಗಿ ಸರ್ಕಾರದಿಂದ ವಿವಿಧ ಸೌಲಭ್ಯಗಳು ಜಾರಿಯಲ್ಲಿದ್ದು, ಸದುಪಯೋಗ ಪಡೆಸಿಕೊಂಡು ಸ್ವಾಲಂಬಿ ಜೀವನ ಸಾಗಿಸಬೇಕೆಂದರು.

ಲಿಂಗಸುಗೂರು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಭೂಪನಗೌಡ ಪಾಟೀಲ್, ಗ್ರೇಡ್-2 ತಹಸೀಲ್ದಾರ ಬಸವರಾಜ ಜಳಿಕಿಮಠ, ಪಿಎಸ್‌ಐ ರತ್ನಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಹುಂಬಣ್ಣ ರಾಠೋಡ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಗೋಕುಲ್ ಹುಸೇನ್, ಬೀದರ ಗೌರಮ್ಮ ಅಭಿವೃದ್ಧಿ ಸಂಸ್ಥೆ ಪರಮೇಶ್ವರ ಬೆಳವಣಗಿ ಹಾಗೂ ಅಂಗನವಾಡಿ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net