ರೈತರು ಸರ್ಕಾರಿ ಯೋಜನೆ ಸದುಪಯೋಗ ಪಡೆದುಕೊಳ್ಳಲು ಹಟ್ಟಿ ಚಿನ್ನದಗಣಿ ಕಂಪನಿ ಅಧ್ಯಕ್ಷ ಮಾನಪ್ಪ ವಜ್ಜಲ್ ಸಲಹೆ

1309 Lingasuguru Agriculture Campaign Awareness Jatha
ಲಿಂಗಸುಗೂರು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕೃಷಿ ಅಭಿಯಾನ ಜಾಗೃತಿ ಜಾಥಾ ವಾಹಕ್ಕೆ ಹಟ್ಟಿ ಚಿನ್ನದಗಣಿ ಕಂಪನಿ ಅಧ್ಯಕ್ಷ ಮಾನಪ್ಪ ವಜ್ಜಲ್ ಸೋಮವಾರ ಚಾಲನೆ ನೀಡಿದರು.
Published on

ಲಿಂಗಸುಗೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಕ್ಷೇತ್ರದ ಬೆಳವಣಿಗೆ ಮತ್ತು ರೈತರ ಅನುಕೂಲಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹಟ್ಟಿ ಚಿನ್ನದಗಣಿ ಕಂಪನಿ ಅಧ್ಯಕ್ಷ ಮಾನಪ್ಪ ವಜ್ಜಲ್ ಹೇಳಿದರು.

ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸೋಮವಾರ ಕೃಷಿ ಅಭಿಯಾನ ಜಾಗೃತಿ ಜಾಥಾ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗಾಗಿ ಅನೇಕ ಸವಲತ್ತುಗಳನ್ನು ನೀಡಿದೆ. ಅದರಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದ ಕೃಷಿ ಸಚಿವ ಬಿ.ಸಿ.ಪಾಟೀಲರು ರೈತರ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿದ್ದಾರೆ. ಪ್ರಸಕ್ತ ವರ್ಷ ಉತ್ತಮ ಮಳೆ ಸುರಿದು ರೈತರು ಬಿತ್ತನೆ ಮಾಡಿದ ಬೆಳೆಗಳು ಉತ್ತಮವಾಗಿ ಬೆಳೆದಿವೆ. ಕೃಷಿ ಸಲಕರಣೆಗಳು ಮತ್ತು ಸರ್ಕಾರಗಳ ಸವಲತ್ತುಗಳ ಬಗ್ಗೆ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸಿದರೆ ಅವರು ಅವುಗಳನ್ನು ಸದುಪಯೋಗ ಪಡೆದುಕೊಳ್ಳಲು ಸಾಧ್ಯವಾಗಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net