ಸರ್ಕಾರದ ನೆರವಿಗಾಗಿ ಛಾಯಾಚಿತ್ರಗ್ರಾಹಕರ ಮೊರೆ

Lingasuguru Photographers Appeal
ತಮ್ಮ ನೆರವಿಗೆ ಸರ್ಕಾರ ಧಾವಿಸಬೇಕೆಂದು ಒತ್ತಾಯಿಸಿ ಫೋಟೋಗ್ರಾಫರ್ ಮತ್ತು ವಿಡಿಯೋ ಗ್ರಾಫರ್ ವೆಲ್‌ಫೇರ್ ಅಸೋಸಿಯೇಷನ್ ಲಿಂಗಸುಗೂರು ಎಸಿ ರಾಜಶೇಖರ ಡಂಬಳಗೆ ಶುಕ್ರವಾರ ಮನವಿ ಸಲ್ಲಿಸಿತು.
Published on

ಲಿಂಗಸುಗೂರು: ಕರೊನಾದಿಂದ ಛಾಯಾವೃತ್ತಿ ಅವಲಂಬಿತರು ಸಂಕಷ್ಟಕ್ಕೀಡಾಗಿದ್ದು, ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಫೋಟೋಗ್ರಾಫರ್ ಮತ್ತು ವಿಡಿಯೋ ಗ್ರಾಫರ್ ವೆಲ್‌ಫೇರ್ ಅಸೋಸಿಯೇಷನ್ ಒತ್ತಾಯಿಸಿದೆ.

ಸಹಾಯಕ ಆಯುಕ್ತ ರಾಜಶೇಖರ ಡಂಬಳರಿಗೆ ಶುಕ್ರವಾರ ಮನವಿ ಸಲ್ಲಿಸಿ, ಒಂದು ವೇಳೆ ನಿರ್ಲಕ್ಷೃ ತೋರಿದರೆ ಅ.31ರಂದು ಬೆಂಗಳೂರು ಚೆಲೋ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಲಾಕ್‌ಡೌನ್‌ನಿಂದಾಗಿ ಯಾವುದೇ ಕಾರ್ಯಕ್ರಮಗಳು ನಡೆಯದೆ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಕುಟುಂಬ ನಿರ್ವಹಣೆಗೆ ತೊಂದರೆಯಾಗಿದೆ. ಸರ್ಕಾರ ಛಾಯಾವೃತ್ತಿದಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಕಾರ್ಮಿಕ ಇಲಾಖೆ ವಿವಿಧ ಯೋಜನೆಗಳ ಮತ್ತು ಸ್ಮಾರ್ಟ್‌ಕಾರ್ಡ್ ವಿತರಿಸಬೇಕು. 151 ವರ್ಷ ಇತಿಹಾಸ ಹೊಂದಿದ ಛಾಯಾಗ್ರಾಹಕ ವೃತ್ತಿಯ ಪೋಷಣೆಗಾಗಿ ಅಕಾಡೆಮಿ ಸ್ಥಾಪಿಸಬೇಕು. ಕೆಪಿಎ ಛಾಯಾ ಭವನಕ್ಕೆ ನಿವೇಶನ ನೀಡಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net