ಭವಿಷ್ಯ ರೂಪಿಸುವಲ್ಲಿ ಗುರುವಿನ ಕೊಡುಗೆ ಅಪಾರ, ಶಾಸಕ ಡಿ.ಎಸ್.ಹೂಲಗೇರಿ ಹೇಳಿಕೆ

ಲಿಂಗಸುಗೂರಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಲಾಯಿತು.
ಲಿಂಗಸುಗೂರಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಲಾಯಿತು.
Published on

ಲಿಂಗಸುಗೂರು: ಸಮಾಜದಲ್ಲಿ ಗುರುವಿಗೆ ಗೌರವ ಸ್ಥಾನ ನೀಡಲಾಗಿದ್ದು, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಡಿ.ಎಸ್.ಹೂಲಗೇರಿ ಹೇಳಿದರು.

ಪಟ್ಟಣದ ವಿಜಯ ಮಹಾಂತೇಶ್ವರ ಶಾಖಾನುಭವ ಮಂಟಪದಲ್ಲಿ ಸೋಮವಾರ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಕ್ಷೇತ್ರದ ಶಾಲೆಗಳ ಸ್ವಚ್ಛತೆ, ಗುಣಮಟ್ಟದ ಶಿಕ್ಷಣ ಮತ್ತು ಮೂಲಸೌಕರ್ಯ ಒದಗಿಸುವತ್ತ ಗಮನ ನೀಡಲಾಗುತ್ತಿದ್ದು, ಕಳೆದೆರಡು ವರ್ಷಗಳಲ್ಲಿ 317 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ವೃತ್ತಿಯ ಜವಾಬ್ದಾರಿ ಅರಿತು ಶಿಕ್ಷಕರು ಗುಣಮಟ್ಟದ ಶಿಕ್ಷಣ ಬೋಧಿಸುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕೆಂದರು.

ಹಟ್ಟಿ ಚಿನ್ನದಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಗಮನ ಹರಿಸುತ್ತಿದ್ದು, ಹೆಚ್ಚಿನ ಅನುದಾನ ಬಿಡುಗಡೆ ಮಾಡುತ್ತಿವೆ. ಶಾಲೆಗಳ ಸ್ವಚ್ಛತೆ, ಮೂಲಸೌಕರ್ಯ ಜವಾಬ್ದಾರಿ ಆಯಾ ಗ್ರಾಪಂಗಳಿಗೆ ವಹಿಸಬೇಕಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net