ಸರ್ಕಾರ ಸಾಂವಿಧಾನಿಕ ಹಕ್ಕು ನೀಡಲಿ

080722 Lingasuguru Bade Jangam Samaj leaders Protest
ಲಿಂಗಸುಗೂರು ಎಸಿ ಕಚೇರಿ ಆವರಣದಲ್ಲಿ ಬೇಡ ಜಂಗಮ ಸಮಾಜದ ಮುಖಂಡರು ನಡೆಸುತ್ತಿರುವ ಅನಿರ್ದಿಷ್ಟ ಧರಣಿಗೆ ಅಮರೇಶ್ವರ ಗುರುಗಜದಂಡ ಶಿವಾಚಾರ್ಯರು ಬೆಂಬಲ ವ್ಯಕ್ತಪಡಿಸಿದರು.
Published on

ಲಿಂಗಸುಗೂರು: ಪರಿಶಿಷ್ಟ ಜಾತಿ ಪ್ರಮಾಣ ಪತ್ರಕ್ಕೆ ಒತ್ತಾಯಿಸಿ, ಬೇಡ ಜಂಗಮ ಸಮುದಾಯ ಕಳೆದ ಮೂರು ದಿನಗಳಿಂದ ಪಟ್ಟಣದ ಎಸಿ ಕಚೇರಿ ಆವರಣದಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಗೆ ಅಮರೇಶ್ವರ ಗುರುಗಜದಂಡ ಶಿವಾಚಾರ್ಯರು ಬೆಂಬಲ ಸೂಚಿಸಿದರು.

ಶುಕ್ರವಾರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶ್ರೀಗಳು, ಸರ್ಕಾರ ಸಂವಿಧಾನದಡಿ ನೀಡಿರುವ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ಬೇಡ ಜಂಗಮರಿಗೆ ಒದಗಿಸುವ ಮೂಲಕ ಸಂವಿಧಾನಿಕ ಹಕ್ಕು ಎತ್ತಿ ಹಿಡಿಯಬೇಕೆಂದು ಒತ್ತಾಯಿಸಿದರು.

ಬೇಡ ಜಂಗಮರು ಹೊಸದಾಗಿ ಮೀಸಲಾತಿ ನೀಡುವಂತೆ ಕೇಳುತ್ತಿಲ್ಲ. ಸಾಂವಿಧಾನಿಕವಾಗಿ ಅಡಕವಾಗಿರುವ ವೀರಶೈವ ಲಿಂಗಾಯತ ಜಂಗಮರೇ ಬೇಡ ಜಂಗಮರಾಗಿದ್ದು, ಅಖಿಲ ಕರ್ನಾಟಕ ಬೇಡ ಜಂಗಮ ಸಮಾಜದ ರಾಜ್ಯಾಧ್ಯಕ್ಷ ಬಿ.ಡಿ.ಹಿರೇಮಠ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸತ್ಯ ಪ್ರತಿಪಾದನಾ ಸತ್ಯಾಗ್ರಹ ನಡೆಸುತ್ತಿದ್ದು, ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net