ಸದೃಢ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ

11092022 Lingasugur sports
Published on

ಲಿಂಗಸುಗೂರು: ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆಗಳು ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಹೆಚ್ಚು ಪಾಲ್ಗೊಳ್ಳಬೇಕೆಂದು ಶಾಸಕ ಡಿ.ಎಸ್.ಹೂಲಗೇರಿ ಹೇಳಿದರು.
ತಾಲೂಕು ಕ್ರೀಡಾಂಗಣದಲ್ಲಿ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಪ್ರಾಥಮಿಕ ಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ಒತ್ತಡ ರಹಿತ ಜೀವನ ಸಾಧ್ಯವಾಗಲಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net