ಹೈಕೋರ್ಟ್ ತೀರ್ಪು ಪಾಲನೆ ಕಡ್ಡಾಯ

120222 Lingasuguru Peacekeeping Meeting
ಲಿಂಗಸುಗೂರಲ್ಲಿ ಶನಿವಾರ ಆಯೋಜಿಸಿದ್ದ ಶಾಂತಿ ಪಾಲನಾ ಸಭೆಯಲ್ಲಿ ಡಿವೈಎಸ್ಪಿ ಎಸ್.ಎಸ್.ಹುಲ್ಲೂರು ಮಾತನಾಡಿದರು.
Published on

ಲಿಂಗಸುಗೂರು: ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಪಾಲನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ತೀರ್ಪು ನೀಡಿದೆ. ಇದರಿಂದಾಗಿ ಸೋಮವಾರದಿಂದ ಪ್ರೌಢಶಾಲೆಗಳನ್ನು ಆರಂಭಿಸಲು ಸರ್ಕಾರ ನಿರ್ದೇಶನ ನೀಡಿದೆ. ಎಲ್ಲರೂ ಶಾಂತಿ, ಸೌಹಾರ್ದತೆ ಕಾಪಾಡಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಕಠಿಣ ಕ್ರಮ ನಿಶ್ಚಿತ ಎಂದು ಡಿವೈಎಸ್ಪಿ ಎಸ್.ಎಸ್.ಹುಲ್ಲೂರು ಹೇಳಿದರು.

ಪಟ್ಟಣದ ಗುರುಭವನದಲ್ಲಿ ಶನಿವಾರ ಆಯೋಜಿಸಿದ್ದ ಶಾಂತಿ ಪಾಲನಾ ಸಭೆಯಲ್ಲಿ ಮಾತನಾಡಿದರು. ಸಮಾಜದಲ್ಲಿ ಧರ್ಮ, ಸಂಸ್ಕೃತಿ ಹೆಸರಿನಲ್ಲಿ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರಬಾರದರು. ಹಿಜಾಬ್, ಕೇಸರಿ ವಸ್ತ್ರ ನೆಪದಲ್ಲಿ ಪ್ರಚೋದನೆ, ದಂಗೆ, ಗಲಾಟೆಯಿಂದ ಮಕ್ಕಳ ಉಜ್ವಲ ಭವಿಷ್ಯ ಹಾಳು ಮಾಡುವುದು ಸರಿಯಲ್ಲ. ಎಲ್ಲರೂ ಸಂವಿಧಾನದ ಆಶಯಗಳಿಗೆ ಬದ್ಧರಾಗಿರಬೇಕು ಎಂದರು.

ಸಿಪಿಐ ಮಹಾಂತೇಶ ಸಜ್ಜನ್, ಪಿಎಸ್‌ಐ ಪ್ರಕಾಶರಡ್ಡಿ ಡಂಬಳ, ಶಿಕ್ಷಣ ಸಂಯೋಜಕ ಹನುಮಂತಪ್ಪ ಕುಳಗೇರಿ, ಪ್ರಾಚಾರ್ಯರಾದ ಸಾಬಣ್ಣ ವಗ್ಗರ್, ಮುರುಘೇಂದ್ರಪ್ಪ, ಪ್ರಮುಖರಾದ ಖಾದರ್ ಪಾಷಾ, ಪ್ರಭುಸ್ವಾಮಿ ಅತ್ತನೂರು, ಎಂ.ಡಿ.ರಫಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net