ಸಿಬಿಐ ತನಿಖೆಗೆ ವಹಿಸಲಿ

ಲಿಂಗಸುಗೂರು ಎಸಿ ಕಚೇರಿ ಮುಂದೆ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಕಾರ್ಯಕಾರಿಣಿ ಸದಸ್ಯ ಸಂದೀಪ, ಶ್ರೀಕಾಂತ ಪಲ್ಲೇದ, ನೇಹಾ, ಸುಶ್ಮಿತಾ ಇತರರಿದ್ದರು.
ಲಿಂಗಸುಗೂರು ಎಸಿ ಕಚೇರಿ ಮುಂದೆ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಕಾರ್ಯಕಾರಿಣಿ ಸದಸ್ಯ ಸಂದೀಪ, ಶ್ರೀಕಾಂತ ಪಲ್ಲೇದ, ನೇಹಾ, ಸುಶ್ಮಿತಾ ಇತರರಿದ್ದರು.
Published on

ಲಿಂಗಸುಗೂರು: ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠರನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗೆ ಕಠಿಣ ಶಿಕ್ಷೆ ಸಿಗಬೇಕು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಎಸಿ ಕಚೇರಿ ಮುಂದೆ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಎಸಿ ಅವಿನಾಶ ಶಿಂಧೆಗೆ ಶುಕ್ರವಾರ ಮನವಿ ಸಲ್ಲಿಸಿದರು.

ಕೊಲೆಗಾರ ಕಾನೂನಿನ ಭಯವಿಲ್ಲದೆ ರಾಜಾರೋಷವಾಗಿ ಇಂತಹ ಕೃತ್ಯವೆಸಗಬೇಕಾದರೆ ರಾಜ್ಯದ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬುದು ಸ್ಪಷ್ಟವಾಗುತ್ತದೆ. ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು. ನೇಹಾ ಹಿರೇಮಠ ಹಂತಕನಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸರು ಮಫ್ತಿಯಲ್ಲಿ ಸಂಚರಿಸಿ ಕಾಲೇಜು ಕ್ಯಾಂಪಸ್‌ನಲ್ಲಿ ಸುರಕ್ಷತೆಯ ಭಾವನೆ ಮೂಡಿಸಬೇಕಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net