ಕೃಷ್ಣಾ ನದಿಗೆ 1.78 ಲಕ್ಷ ಕ್ಯೂಸೆಕ್ ನೀರು: ಶೀಲಹಳ್ಳಿ ಸೇತುವೆ ಮುಳುಗಡೆ ನಡುಗಡ್ಡೆ ಗ್ರಾಮಗಳ ಸಂಪರ್ಕ ಕಡಿತ

150922 Shilahalli Bridge Sinking
Published on

ಲಿಂಗಸುಗೂರು: ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 25ಕ್ರಸ್ಟ್ ಗೇಟುಗಳ ಮೂಲಕ 1,78,740 ಕ್ಯೂಸೆಕ್ ನೀರು ಗುರುವಾರ ಹರಿಬಿಡಲಾಗಿದ್ದು, ನದಿಯಲ್ಲಿ ಪ್ರವಾಹ ಉಂಟಾಗಿ ನಡುಗಡ್ಡೆ ಹಳ್ಳಿಗಳಿಗೆ ಸಂಪರ್ಕಿಸುವ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ. ಆಲಮಟ್ಟಿ ಅಣೆಕಟ್ಟೆನಿಂದ ಬಸವಸಾಗರ ಜಲಾಶಯಕ್ಕೆ 1.70 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 1,72,740 ಲಕ್ಷ ಕ್ಯೂಸೆಕ್ ಮತ್ತು ಮುರುಡೇಶ್ವರ ವಿದ್ಯುತ್ ಉತ್ಪಾದನಾ ಘಟಕದ ಮೂಲಕ 6 ಸಾವಿರ ಕ್ಯೂಸೆಕ್ ನೀರು ಸೇರಿ ಒಟ್ಟು 1,78,740 ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿದು ಬಿಡಲಾಗುತ್ತಿದೆ. ಜಲಾಶಯದ ಗರಿಷ್ಠ ನೀರಿನ ಸಾಮರ್ಥ್ಯ 492.252 ಮೀ. (33 ಟಿಎಂಸಿ) ಇದ್ದು, ಗುರುವಾರದ ನೀರಿನ ಮಟ್ಟ 491.35 ಮೀ. (29.278 ಟಿಎಂಸಿ) ಇದೆ.

ಜಲಾಶಯದಿಂದ 1,78,740 ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿಬಿಟ್ಟ ಪ್ರಯುಕ್ತ ಶೀಲಹಳ್ಳಿ ಸೇತುವೆ ಪುನಃ ಮುಳುಗಡೆಯಾಗಿದ್ದು, ತಾಲೂಕಿನ ನದಿ ತೀರದ ಕಡದರಗಡ್ಡಿ, ಯರಗೋಡಿ, ಹಂಚಿನಾಳ ಗ್ರಾಮಗಳ ಜನತೆ ಜಲದುರ್ಗ ಮಾರ್ಗವಾಗಿ ತಾಲೂಕು ಕೇಂದ್ರಕ್ಕೆ 45 ಕಿಮೀ. ಸುತ್ತುವರಿದು ಬರುವ ಅನಿವಾರ್ಯತೆ ಎದುರಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸೇತುವೆಯ ಎರಡೂ ಬದಿ ಪೊಲೀಸರನ್ನು ನಿಯೋಜಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net