

ಲಿಂಗಸುಗೂರು: ವಿಪಕ್ಷ ನಾಯಕ ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿರುವುದನ್ನು ಖಂಡಿಸಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪಟ್ಟಣದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ದೊಡ್ಡ ಹನುಮಂತ ದೇವಸ್ಥಾನ ಬಳಿಯಿಂದ ಎಸಿ ಕಚೇರಿವರೆಗೆ ಮೆರವಣಿಗೆ ನಡೆಯಿತು. ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗುತ್ತಾ ಗೂಂಡಾವರ್ತನೆ ತೋರಿರುವ ಕಿಡಿಗೇಡಿಗಳ ವರ್ತನೆ ಖಂಡನೀಯ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರರ ಕುಮ್ಮಕ್ಕಿನಿಂದ ಘಟನೆ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಸಿ ಕಚೇರಿ ನೌಕರ ಅಮರೇಶಗೆ ಮನವಿ ಸಲ್ಲಿಸಿದರು.