ಸಮಾಜ ತಲೆ ತಗ್ಗಿಸುವ ಘಟನೆ

19LNG01
Published on

ಲಿಂಗಸುಗೂರು: ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿಯನ್ನು ಹತ್ಯೆಗೈದ ದುಷ್ಕರ್ಮಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ವೀರಶೈವ ಜಂಗಮ ಸಮಾಜದ ಪ್ರಮುಖರು ಎಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿ ಎಸಿ ಅವಿನಾಶ ಶಿಂಧೆಗೆ ಶುಕ್ರವಾರ ಮನವಿ ಸಲ್ಲಿಸಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ, ವಿದ್ಯಾನಗರದ ಕೆಎಲ್‌ಇ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾಗೆ ಫಯಾಜ್ ಎಂಬಾತ ಪ್ರೀತಿಸುವಂತೆ ಪೀಡಿಸುತ್ತಿದ್ದ. ಏ.18 ರಂದು ನೇಹಾ ಪರೀಕ್ಷೆ ಬರೆದು ಮನೆಗೆ ತೆರಳುವಾಗ ಕಾಲೇಜು ಕ್ಯಾಂಪಸ್‌ಗೆ ಆಗಮಿಸಿದ ಫಯಾಜ್ ನೇಹಾಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆಯಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾರ್ಥಿನಿ ನೇಹಾರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರಮುಖರಾದ ರಾಜು ಹಿರೇಮಠ, ವಿರೂಪಾಕ್ಷಯ್ಯ ಹಿರೇಮಠ, ಮಹೇಶ ಜಗವತಿಮಠ, ಅಮರೇಶ ವಸ್ತ್ರದ್, ಚನ್ನಬಸವ ಹಿರೇಮಠ, ಗುರುರಾಜ, ಸಂತೋಷ ಸೊಪ್ಪಿಮಠ, ಗಂಗಾಧರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net