ಮೋದಿ ಶ್ರಮದಿಂದ ಅಭಿವೃದ್ಧಿಯತ್ತ ಭಾರತ

Dr Sudarshan Sajjan
ಡಾ.ಸುದರ್ಶನ್ ಸಜ್ಜನ್.
Published on

ಲಿಂಗಸುಗೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿರುವ ಗ್ರಾಮೀಣ ಜನತೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿ ಡಾ.ಸುದರ್ಶನ್ ಸಜ್ಜನ್ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವಿರತ ಪರಿಶ್ರಮದ ಫಲವಾಗಿ ದೇಶ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ರಾಜ್ಯದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರ ಆಡಳಿತ ಅವಧಿಯ ಯೋಜನೆಗಳು ಗ್ರಾಮೀಣ ಜನರ ಮನ್ನಣೆ ಪಡೆದಿವೆ. ಇದರಿಂದಾಗಿ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತವಾಗಿದೆ. ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು. ಪ್ರಮುಖರಾದ ಆನಂದ್, ಅಂಜನ್ ಪ್ರಸಾದ್, ಶಿವಕುಮಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net