ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳನ್ನು ಪರಿಹರಿಸಿ

MLC Sharanagouda Patil
ಎಂಎಲ್‌ಸಿ ಶರಣಗೌಡ ಪಾಟೀಲ್ ಬಯ್ಯಪುರ.
Published on

ಲಿಂಗಸುಗೂರು: ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಹಲವು ಸಮಸ್ಯೆಗಳ ಬಗ್ಗೆ ಸಮಗ್ರವಾಗಿ ಚರ್ಚಿಸಿ ಬೆಳಗಾವಿ ಅಧಿವೇಶನ ಮುಗಿಯುವುದರೊಳಗೆ ಪರಿಹಾರ ಘೋಷಿಸಬೇಕೆಂದು ಎಂಎಲ್‌ಸಿ ಶರಣಗೌಡ ಪಾಟೀಲ್ ಬಯ್ಯಪುರ ಮುಖ್ಯಮಂತ್ರಿಗೆ ಬುಧವಾರ ಮನವಿ ಸಲ್ಲಿಸಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗಳು ನಡೆದರೂ ಪರಿಹಾರ ಸಿಗುತ್ತಿಲ್ಲ. ಬೆಂಗಳೂರಿನ ಪ್ರಮುಖ ಇಲಾಖೆಗಳನ್ನು ಬೆಳಗಾವಿಗೆ ಸ್ಥಳಾಂತರಿಸಲು ಕಾಲಮಿತಿಯೊಳಗೆ ಜಾರಿಗೊಳಿಸಬೇಕು. ಕಳೆದ 6 ತಿಂಗಳಿಂದ ಸುರಿದ ಮಳೆಯಿಂದ ರಸ್ತೆಗಳು ಹದಗೆಟ್ಟಿದ್ದು, ದುರಸ್ತಿಗೆ ವಿಶೇಷ ಅನುದಾನ ಘೋಷಿಸಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಬೆಳಗಾವಿ ಸುವರ್ಣ ಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು.

ಕಲ್ಯಾಣ ಕರ್ನಾಟಕ ಭಾಗದ ಎಂಟು ಜಿಲ್ಲೆಗಳಲ್ಲಿ 10 ಲಕ್ಷ ಕಿಮೀ ಪ್ರಯಾಣಿಸಿದ ಸಾರಿಗೆ ಬಸ್‌ಗಳನ್ನು ಬದಲಾಯಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ 100 ಹೊಸ ಬಸ್ ನೀಡಬೇಕು. ವಿಶ್ವ ಬಂಡವಾಳ ಸಮಾವೇಶದಿಂದ ರಾಜ್ಯಕ್ಕೆ 10 ರಿಂದ 11 ಲಕ್ಷ ಕೋಟಿ ರೂ. ಬಂಡವಾಳ ಹೂಡಲು ಬಂದಿರುವ ಉದ್ದಿಮೆಗಳನ್ನು ಈ ಭಾಗದಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net