ಸಂಸ್ಕಾರ ನೀಡುವಲ್ಲಿ ಮಹಿಳೆಯರ ಪಾತ್ರ ಪ್ರಮುಖ - ಶಾಸಕ ಡಿ.ಎಸ್.ಹೂಲಗೇರಿ ಅನಿಸಿಕೆ

Lingasuguru Womens Day
ಲಿಂಗಸುಗೂರಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಡಿ.ಎಸ್.ಹೂಲಗೇರಿ ಸೋಮವಾರ ಉದ್ಘಾಟಿಸಿದರು.
Published on

ಲಿಂಗಸುಗೂರು: ಜೀವಸಂಕುಲ ಎಸಗುವ ಅನೇಕ ತಪ್ಪುಗಳನ್ನು ಭೂ ಮಾತೆ ಒಡಲಲ್ಲಿಟ್ಟುಕೊಂಡು ಸಹನಾಶಕ್ತಿ ಪ್ರದರ್ಶಿಸುವಂತೆ ಮಹಿಳಾ ಮಾತೆಯರು ಕೂಡ ಸಮಾಜದ ಅಂಕು-ಡೊಂಕುಗಳನ್ನು ಸಹಿಸಿಕೊಳ್ಳುವ ಮೂಲಕ ಸಹನಾಶೀಲರಾಗಿದ್ದಾರೆ. ಇದರಿಂದಾಗಿ ಮಹಿಳೆಯರಿಗೆ ಭೂ ಮಾತೆಯ ಸ್ಥಾನ ನೀಡಲಾಗಿದೆ ಎಂದು ಶಾಸಕ ಡಿ.ಎಸ್.ಹೂಲಗೇರಿ ಹೇಳಿದರು.

ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ತಾಲೂಕು ಆಡಳಿತ ಮತ್ತು ಸಿಡಿಪಿಒ ಕಚೇರಿಯಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಸೋಮವಾರ ಮಾತನಾಡಿದರು. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವಲ್ಲಿ, ಪರಿಸರ ರಕ್ಷಣೆಯಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನೀಡಲಾಗುವ ಪೌಷ್ಟಿಕ ಆಹಾರ ಗರ್ಭಿಣಿಯರು ಮತ್ತು ಮಕ್ಕಳು ಆರೋಗ್ಯ ಕಾಪಾಡುವಲ್ಲಿ ಸಹಕಾರಿಯಾಗಿದೆ. ಇದರಿಂದ ಆರೋಗ್ಯವಂತ ಮತ್ತು ಸುಭದ್ರ ರಾಷ್ಟ್ರ ನಿರ್ಮಾಣವಾಗಲಿದೆ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಪಾಟೀಲ್, ಪ್ರಮುಖರಾದ ಪಾಮಯ್ಯ ಮುರಾರಿ, ಹನುಮಂತಪ್ಪ ಕಂದಗಲ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net