ಆಮಿಷಕ್ಕೆ ಒಳಗಾಗದೆ ಮತ ಚಲಾಯಿಸಿ

31LNG01
Published on

ಲಿಂಗಸುಗೂರು: ಸರ್ಜಾಪುರ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ವಧು-ವರಗೆ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ತಾಲೂಕು ಆಡಳಿತ, ತಾಪಂ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಸಹಯೋಗದಲ್ಲಿ ನಡೆದ ಮತದಾನ ಜಾಗೃತಿ ಅಭಿಯಾನಕ್ಕೆ ತಾಪಂ ಇಒ ಅಮರೇಶ ಯಾದವ್ ಚಾಲನೆ ನೀಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಪ್ರಜೆ ಕಡ್ಡಾಯವಾಗಿ ಮತದಾನ ಮಾಡಬೇಕು. ವೃದ್ಧರು ಹಾಗೂ ಹಿರಿಯ ನಾಗರಿಕರಿಗೆ ಮನೆಯಿಂದ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ. ಆಸೆ-ಆಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net