ಸತ್ಯ ಪ್ರತಿಪಾದನಾ ಸತ್ಯಾಗ್ರಹ ಬೆಂಬಲಿಸಿ

11092022 Lingasugur Jangama samaja
Published on

ಲಿಂಗಸುಗೂರು: ಬೇಡ ಜಂಗಮರಿಗೆ ಸಂವಿಧಾನ ಬದ್ಧವಾಗಿ ಪ್ರಾಪ್ತವಾದ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಡೆಯುತ್ತಿರುವ ಸತ್ಯ ಪ್ರತಿಪಾದನಾ ಸತ್ಯಾಗ್ರಹ ಬೆಂಬಲಿಸುವಂತೆ ಒತ್ತಾಯಿಸಿ ಶಾಸಕ ಡಿ.ಎಸ್.ಹೂಲಗೇರಿಗೆ ಜಂಗಮ ಸಮುದಾಯದವರು ಭಾನುವಾರ ಮನವಿ ಸಲ್ಲಿಸಿದರು.

ಸ್ವ ಹಿತಾಸಕ್ತಿ ಹಾಗೂ ತಪ್ಪು ತಿಳಿವಳಿಕೆಯಿಂದ ಪೂರ್ವಗ್ರಹ ಪೀಡಿತರಾಗಿರುವ ಕೆಲ ರಾಜಕೀಯ ನಾಯಕರು ಮತ್ತು ಅಧಿಕಾರಿಗಳು ಸಂವಿಧಾನದ ಹಕ್ಕು ಹರಣ ಮಾಡುವ ಪ್ರಕ್ರಿಯೆಗೆ ವಿರುದ್ಧವಾಗಿ ಜೂ.30 ರಿಂದ ಸತ್ಯಪ್ರತಿಪಾದನಾ ಸತ್ಯಾಗ್ರಹ ನಡೆಸಲಾಗುತ್ತಿದೆ. ನ್ಯಾಯಾಲಯ, ಸರ್ಕಾರದ ಆದೇಶ ಮನಗಂಡು ಬೇಡ ಜಂಗಮರ ನ್ಯಾಯಬದ್ಧ ಹೋರಾಟಕ್ಕೆ ಬೆಂಬಲ ನೀಡಬೇಕು.

ಬೇಡ ಜಂಗಮರ ಪರಿಶಿಷ್ಟ ಜಾತಿ ಪ್ರಮಾಣ ಪತ್ರದ ಹಕ್ಕಿನ ಪರವಾಗಿ ಸೆ.12 ರಿಂದ ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿ ಧ್ವನಿ ಎತ್ತಬೇಕು. ಮುಖ್ಯಮಂತ್ರಿ, ಸಮಾಜ ಕಲ್ಯಾಣ ಸಚಿವ ಮತ್ತು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸತ್ಯ ಮತ್ತು ಕಾನೂನು ಬದ್ಧ ಅಂಶಗಳನ್ನು ಬೆಂಬಲಿಸಿ ಅನುಸೂಚಿತ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಪತ್ರ ಬರೆಯಬೇಕೆಂದು ಕೋರಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net