ಹುಬ್ಬಳ್ಳಿಯಲ್ಲಿ ವೀರಶೈವ ಲಿಂಗಾಯತ ಗ್ಲೋಬಲ್ ಬಿಜಿನೆಸ್ ಸಮಾವೇಶ

IMG_20240116_114105_608-1.jpg
Published on

ಹುಬ್ಬಳ್ಳಿ: ಅಂತಾರಾಷ್ಟ್ರೀಯ ಲಿಂಗಾಯತ ಯೂತ್ ಫೋರಂ (ಐಎಲ್ ವೈಎಫ್) ವತಿಯಿಂದ ವೀರಶೈವ ಲಿಂಗಾಯತ ಗ್ಲೋಬಲ್ ಬಿಜನೆಸ್ ಕಾನ್ಕ್ಲೇವ್- 2024 ಅನ್ನು ಇಲ್ಲಿಯ ವಿದ್ಯಾನಗರ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 23ರಿಂದ ಮೂರು ದಿನಗಳವರೆಗೆ ಆಯೋಜಿಸಲಾಗಿದೆ ಎಂದು ಐಎಲ್ವೈಎ್ ಚೇರ್ಮನ್ ಅವಿನಾಶ್ ಪಾಳೆಗಾರ್ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ಎಲ್ಲ ವೀರಶೈವ ಲಿಂಗಾಯತ ಸಮುದಾಯದ ಉದ್ಯಮಿಗಳು, ಉದ್ಯಮಶೀಲರು ಹಾಗೂ ವೃತ್ತಿಪರರನ್ನು ಒಂದೇ ವೇದಿಕೆಯಡಿ ತರುವ ಉದ್ದೇಶದಿಂದ ಈ ಸಮಾವೇಶ ಏರ್ಪಡಿಸಲಾಗಿದೆ.

ಇಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಪ್ರಾಯೋಗಿಕ ಉಪಕ್ರಮಗಳನ್ನು ಅಭಿವೃದ್ಧಿಪಡಿಸುವ ಆಥಿರ್ಕ, ಕೈಗಾರಿಕಾ, ವ್ಯಾಪಾರಿಕ ಚಟುವಟಿಕೆಗಳನ್ನು ಮುಂದುವರಿಸುವ ಮಾಗೋರ್ಪಾಯಗಳ ಬಗ್ಗೆ ಚಚಿರ್ಸಲಾಗುತ್ತದೆ ಎಂದರು.

ವಿಶೇಷವಾಗಿ ಈ ಸಮ್ಮೇಳನದಲ್ಲಿ ವಸ್ತು ಪ್ರದರ್ಶನ ಏರ್ಪಡಿಸಲಾಗುತ್ತಿದ್ದು, 200ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗುವುದು. ಆಧುನಿಕ ಕೃಷಿ, ಫ್ರಾಂಚೈಸಿ ಅಭಿವೃದ್ಧಿ ವಿಷಯಗಳಿಗೆ ಒತ್ತು ನೀಡಲಾಗುತ್ತಿದೆ.
ಫೋರಂ ನಲ್ಲಿ ಸಾವಿರಕ್ಕೂ ಹೆಚ್ಚು ವೈದ್ಯರು ಇದ್ದು, ಅವರಿಗಾಗಿ ಡಾಕ್ಟರ್ಸ್ ಅಧಿವೇಶನ ಇರಲಿದೆ.
ವೆಂಡರ್ ಡೆವಲಪ್ಮೆಂಟ್ ಪ್ರೋಗ್ರಾಂ ಕೂಡ ನಡೆಯಲಿದೆ. ಸುಮಾರು 50 ಸಾವಿರ ಜನರು ಸಮ್ಮೇಳನದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.

ವೇದಿಕೆಯ ಸದಸ್ಯ ಚನ್ನು ಹೊಸಮನಿ ಮಾತನಾಡಿ, ರಾಜ್ಯದ ಪ್ರತಿ ತಾಲೂಕಿನಲ್ಲಿ ಫೋರಂ ಚಟುವಟಿಕೆಗಳನ್ನು ಹೆಚ್ಚಿಸಲು ಪ್ರಯತ್ನ ಮಾಡಲಾಗುತ್ತಿದೆ. ಹಂತಹಂತವಾಗಿ ಸಮಾಜದ ಎಲ್ಲರನ್ನು ತಲುಪುವ ಕೆಲಸ ಆಗಲಿದೆ ಎಂದರು.

ಮಹಾರಾಷ್ಟ್ರ, ತೆಲಂಗಾಣ, ಕೇರಳ, ಆಂಧ್ರಪ್ರದೇಶ, ಮುಂತಾದೆಡೆಯಿಂದ ಸಮ್ಮೇಳನದಲ್ಲಿ ಪಾಲ್ಗೊಳ್ಳುವರು. ಜಗತ್ತಿನಾದ್ಯಂತ ಇರುವ ವೀರಶೈವ ಲಿಂಗಾಯತ ಸಮುದಾಯದ ಉದ್ಯಮ ದಿಗ್ಗಜರನ್ನು ಒಂದೇ ಸೂರಿನಡಿ ಕರೆತಂದು ಕರ್ನಾಟಕದಲ್ಲಿನ ಹೂಡಿಕೆ ಅವಕಾಶಗಳ ಬಗ್ಗೆ ಚಚಿರ್ಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಸ್ಟಾರ್ಟಅಪ್ ಘಟಕವನ್ನು ಬಲಪಡಿಸುವುದು ಮತ್ತು ನಿರೀತ ಉದ್ಯಮಿಗಳಿಗೆ ಮಾರ್ಗದರ್ಶನ ನೀಡುವುದು ಸೇರಿ ವಿವಿಧ ಉದ್ದೇಶಗಳನ್ನು ಇಟ್ಟುಕೊಂಡು ಸಮ್ಮೇಳನ ಏರ್ಪಡಿಸಲಾಗಿದೆ ಎಂದು ಫೋರಂ ಸಂಸ್ಥಾಪಕ ಸಂತೋಷ ಕೆಂಚಾಂಬ ತಿಳಿಸಿದರು.

ವೇದಿಕೆಯ ಶಿವಪ್ರಸಾದ ತಾಳೂರ, ರಮೇಶ ಪಾಟೀಲ, ರವಿರಾಜ್ ಕಮ್ಮಾರ, ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net