ಆ.1ರಿಂದ ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆ ಜೋಡಣೆ

27charan1
Published on

ಚಾಮರಾಜನಗರ: ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರುಗಳನ್ನು ಅಧಿಕೃತಗೊಳಿಸಲು, ದಢೀಕರಿಸಲು, ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಗೆ ಮತದಾರರ ಆಧಾರ್ ಸಂಖ್ಯೆಯನ್ನು ಜೋಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕೆ ಸಹಕರಿಸಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಕೋರಿದರು.


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ಆಧಾರ್ ಸಂಖ್ಯೆಯನ್ನು ಮತದಾರರ ಪಟ್ಟಿಗೆ ಸೇರ್ಪಡೆ, ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಮಂಗಳವಾರ ಕರೆಯಲಾಗಿದ್ದ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮತನಾಡಿದರು. ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯಲ್ಲಿ ನೋಂದಾಯಿತರಾಗಿರುವ ಎಲ್ಲ ಮತದಾರರಿಂದ ಆಧಾರ್ ಸಂಖ್ಯೆಯ ವಿವರವನ್ನು ನಮೂನೆ 6ಬಿ ರಲ್ಲಿ ಪಡೆದು, ಮತದಾರರ ಪಟ್ಟಿಯಲ್ಲಿ ಆಧಾರ್ ಸಂಖ್ಯೆ ಡಾಟಾವನ್ನು ನಮೂದಿಸಲಾಗುವುದು. ಈ ಕಾರ್ಯಕ್ರಮವು ಆ.1 ರಿಂದ ಜಾರಿಗೆ ಬರಲಿದ್ದು, ಮತದಾರರು ಸ್ವಯಂಪ್ರೇರಿತವಾಗಿ ತಮ್ಮ ಆಧಾರ್ ಸಂಖ್ಯೆ ನೀಡಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರುವುದನ್ನು ಅಧಿಕತಗೊಳಿಸಿಕೊಳ್ಳಬೇಕು ಎಂದು ತಿಳಿಸಿದರು.

ಚುನಾವಣಾ ತಹಸೀಲ್ದಾರ್ ವಿ.ವಿನೋದಾ, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಎಸ್.ಬಾಲಸುಬ್ರಮಣ್ಯ, ಬ್ಯಾಡಮೂಡ್ಲು ಬಸವಣ್ಣ, ಶ್ರೀನಾಥ್, ಮಹೇಶ್ ಗೌಡ ಇನ್ನಿತರರು ಸಭೆಯಲ್ಲಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net