

ಬೆಳ್ವೆ: ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ವತಿಯಿಂದ ಬೆಳ್ವೆ ಸಂದೇಶ್ ಕಿಣಿ ಮೆಮೂರಿಯಲ್ ಚಾರಿಟೇಬಲ್ ಟ್ರಸ್ಟ್ ಸಭಾಂಗಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡ ಇಂಜಿನಿಯರ್ಸ್ ಡೇ ಕಾರ್ಯಕ್ರಮದಲ್ಲಿ ತಾಲೂಕು ಸಂಯೋಜನಾಧಿಕಾರಿ ಪ್ರದೀಪ್ ಹೆಗ್ಡೆ ಅರಸಮ್ಮಕಾನು ಅವರನ್ನು ಸನ್ಮಾನಿಸಲಾಯಿತು.
ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ, ಉಪಾಧ್ಯಕ್ಷ ಬಾಬು ಶೆಟ್ಟಿ ಜಗ್ಲುಗುಡ್ಡೆ, ಸ್ಥಾಪಕಾಧ್ಯಕ್ಷ ಬಿ.ರಾಜೇಂದ್ರ ಕಿಣಿ ಬೆಳ್ವೆ, ವಲಯ ಅಧ್ಯಕ್ಷ ಎಚ್.ವಸಂತಕುಮಾರ್ ಶೆಟ್ಟಿ ಬೆಳ್ವೆ, ಕಾರ್ಯದರ್ಶಿಗಳಾದ ವೈ.ಪಟ್ಟಾಭಿರಾಮ್ ಭಟ್ ಮರೂರು, ಅಣ್ಣಯ್ಯ ಶೆಟ್ಟಿ, ಜತೆ ಕಾರ್ಯದರ್ಶಿ ಕೀರ್ತಿ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಜಯಪ್ರಕಾಶ್ ಶೆಟ್ಟಿ ಯಳಂತೂರು, ಮಾಜಿ ಅಧ್ಯಕ್ಷ ಬಿ.ಸತೀಶ್ ಕಿಣಿ ಬೆಳ್ವೆ, ನಿಕಟ ಪೂರ್ವ ಕೋಶಾಧಿಕಾರಿ ಚಂದ್ರಿಕಾ ಬೆಳ್ವೆ, ಸದಸ್ಯ ಮಹಾಬಲ ನಾಯ್ಕ ಅಲ್ಬಾಡಿ, ಉದಯ ಜೋಗಿ ಗೋಳಿಯಂಗಡಿ, ಜಯಪ್ರಕಾಶ್ ಶೆಟ್ಟಿ ಗೋಳಿಯಂಗಡಿ, ಸಂತೋಷ ಶೆಟ್ಟಿ ಗೋಳಿಯಂಗಡಿ, ಶಶಿಧರ ಶೆಟ್ಟಿ ಶಾಂದ್ರಬೆಟ್ಟು, ಕೆ.ಸಂಜೀವ ಆರ್ಡಿ ಉಪಸ್ಥಿತರಿದ್ದರು.