ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಮತದಾನ ಹಿನ್ನೆಲೆ: ಫೆ.14ರ ಸಂಜೆಯಿಂದ ಮದ್ಯ ನಿಷೇಧ

excise
Published on

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಶುಕ್ರವಾರ (ಫೆ. 16) ಮತದಾನ ನಡೆಯುವ ಹಿನ್ನೆಲೆಯಲ್ಲಿ ಬುಧವಾರ (ಫೆ. 14) ಸಂಜೆ 5 ಗಂಟೆಯಿಂದ ಶನಿವಾರ (ಫೆ. 17) ಬೆಳಗ್ಗೆ 6 ಗಂಟೆವರೆಗೆ ರಾಜಧಾನಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಪಾರದರ್ಶಕವಾಗಿ ಚುನಾವಣೆ ನಡೆಸಲು, ಶಾಂತಿ ಸುವ್ಯವಸ್ಥೆ ಕಾಪಾಡಲು ನಿಟ್ಟಿನಲ್ಲಿ ಮತದಾನ ಅಂತ್ಯಗೊಳ್ಳುವ 48 ಗಂಟೆ ಪೂರ್ವದಲ್ಲಿ ಮತ್ತು ಮತ ಎಣಿಕೆ ದಿನದಂದು ಮದ್ಯ ಮಾರಾಟ ನಿರ್ಬಂಧಿಸಲಾಗಿದೆ ಎಂದು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಆದೇಶ ಹೊರಡಿಸಿದ್ದಾರೆ. ನಿಯಮ ಉಲ್ಲಂಸಿ ಮದ್ಯ ಸಾಗಣೆ, ಮಾರಾಟ ಅಥವಾ ದಾಸ್ತಾನು ಮಾಡಿಕೊಂಡರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮದ್ಯ ಮಾರಾಟ ನಿಷೇಧಕ್ಕೆ ಬೆಂಗಳೂರು ನಗರ ಜಿಲ್ಲಾ ವರ್ತಕರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. ಮದ್ಯ ನಿಷೇಧ ಹಿನ್ನೆಲೆಯಲ್ಲಿ ಸರ್ಕಾರದ ಬೊಕ್ಕಸಕ್ಕೆ ಅಂದಾಜು 250 ಕೋಟಿ ರೂ. ಆದಾಯ ನಷ್ಟವಾಗಲಿದೆ. ಪ್ರೇಮಿಗಳ ದಿನದಂದು ಮದ್ಯ ಮಾರಾಟ ಹೆಚ್ಚಿರುತ್ತದೆ. ಕೇವಲ 16 ಸಾವಿರ ಮಂದಿ ಮಾತ್ರ ಮತ ಚಲಾಯಿಸುತ್ತಾರೆ. ಅವರೆಲ್ಲರೂ ವಿದ್ಯಾವಂತರು. ಹೀಗಾಗಿ, ಚುನಾವಣಾ ಆಯೋಗ ಇದನ್ನು ಮರು ಪರಿಶೀಲಿಸಬೇಕೆಂದು ಕೋರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net