ಗ್ರಾಮ ಆಡಳಿತಾಧಿಕಾರಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

dc office new
Published on

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅರ್ಹರಾದ 683 ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿ ವಿವರ ಪ್ರಕಟಿಸಲಾಗಿದ್ದು, ಕರ್ನಾಟಕ ನಾಗರೀಕ ಸೇವಾ ನೇರ ನೇಮಕಾತಿ ಸಾಮಾನ್ಯ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದ್ದಾರೆ.

ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಪೈಕಿ 34 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅ. 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ತಾತ್ಕಾಲಿಕ ಅಂಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸಐಟ್ ಡಿಡಿಡಿ://ಛಿ.ಚ್ಟ.್ಞಜ್ಚಿ.ಜ್ಞಿನಲ್ಲಿ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಿ ನಿಗದಿತ ದಿನಾಂಕದವರೆಗೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಅರ್ಹ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. 2024 ಡಿ.20 ರಿಂದ 24 ರವರೆಗೆ ಅಧಿಸೂಚನೆಯಲ್ಲಿ ನಿಗದಿಯಾಗಿರುವ ಹುದ್ದೆಗಳ ಎದುರಾಗಿ 1:3 ರ ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ದಾಖಲೆ ಪರಿಶೀಲನೆಗೆ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

2025 ರ ಜ.2 ರಿಂದ 10 ರವರೆಗೆ 1:3 ಅನುಪಾತದಲ್ಲಿ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸುವುದು ಮತ್ತು ವಿಕಲಚೇತನ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸುವುದು ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು.ಜ.15 ರಂದು ತಾತ್ಕಾಲಿಕ 1:1 ಆಯ್ಕೆ ಪಟ್ಟಿ ಮತ್ತು ಹೆಚ್ಚುರಿ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು.16 ರಿಂದ 23 ರವರೆಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗುವುದು.

ಜ.27 ರಂದು ಅಂತಿಮ ಆಯ್ಕೆ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು. ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ರಜಾ ದಿನಗಳನ್ನು ಹೊರತುಪಡಿಸಿ ಕಚೇರಿ ವೇಳೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಡಿಸಿ ತಿಳಿಸಿದ್ದಾರೆ.

ಗ್ರಾಮ ಆಡಳಿತ ಅಧಿಕಾರ ಹುದ್ದೆಗಳ ನೇಮಕಾತಿ ನಡೆಸುವ ಪ್ರತಿ ಹಂತದ ಪ್ರಕ್ರಿಯೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಹಾಗೂ ಅಂತರ್ಜಾಲದಲ್ಲಿ ಪ್ರಚಾರ ಮಾಡಲಾಗುವುದು ಎಂದು ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ ಮತ್ತು ಆಯ್ಕೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net