ಬಳ್ಳಾರಿ : ಅಮೆರಿಕದ ಸ್ಟಾೃನ್‌ಫೋರ್ಡ್ ವಿವಿ ವಾರ್ಷಿಕವಾಗಿ ಪ್ರಕಟಿಸುವ ಜಗತ್ತಿನ ಖ್ಯಾತ ವಿಜ್ಞಾನಿಗಳ ಪಟ್ಟಿಯಲ್ಲಿ ಇಲ್ಲಿನ ವಿಜಯನಗರ ಶ್ರೀಕೃಷ್ಣ ದೇವರಾಯ ವಿವಿಯ ಮೂವರು ಪ್ರಾಧ್ಯಾಪಕರು ಸ್ಥಾನ ಪಡೆದಿದ್ದಾರೆ.
ವಿವಿಯ ಗಣಿತಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಕೆ.ವಿ.ಪ್ರಸಾದ್ ಐದನೇ ಬಾರಿ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಹನುಮೇಶ್ ವೈದ್ಯ ಮೂರನೇ ಬಾರಿ ಮತ್ತು ರಸಾಯನಶಾಸ್ತ ವಿಭಾಗದ ಪ್ರೊ. ಕೆ ಎಸ್.ಲೋಕೇಶ್ ಮೊದಲ ಬಾರಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ವಿಶ್ವದರ್ಜೆಯ ಗುಣಮಟ್ಟದ ಸಂಶೋಧನಾ ಲೇಖನಗಳನ್ನು ವೆಬ್ ಆಫ್ ಸೈನ್ಸ್, ಸ್ಕೋಪಸ್, ಗೂಗಲ್ ಸ್ಕಾಲರ್, ಎಚ್ ಇಂಡೆಕ್ಸ್, ಇಂಪ್ಯಾಕ್ಟ್ ಫ್ಯಾಕ್ಟರ್, ಸೈಟೇಷನ್ ಹೀಗೆ ಹಲವಾರು ಸಂಯೋಜಿತ ಮಾನದಂಡಗಳನ್ನು ಆಧರಿಸಿ ವಿಶ್ವದ ಉತ್ತಮ ಸಂಶೋಧಕರನ್ನು ಗುರುತಿಸಿ ವಿವಿಯು ಪಟ್ಟಿ ಬಿಡುಗಡೆ ಮಾಡುತ್ತದೆ.