ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ

yaksha
ಕಥೆ ಹೇಳುವ ಕೇಳುವ ಕಮ್ಮಟವನ್ನು ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಕೋಟ್ಯಾನ್ ಉದ್ಘಾಟಿಸಿದರು
Published on

ಕಾರ್ಕಳ: ವಿದ್ಯಾರ್ಥಿಗಳ ಮನಸ್ಸಿನ ಬೆಳವಣಿಗೆಗೆ, ವ್ಯಕ್ತಿತ್ವ ವಿಕಸನಕ್ಕೆ, ತಿಳಿವಳಿಕೆಗೆ ಸಹಕಾರಿಯಾಗಿದೆ. ಸಮಾಜಕ್ಕೆ ಜವಾಬ್ದಾರಿಯುತ ನಾಗರಿಕರನ್ನು ನೀಡುತ್ತದೆ ಎಂದು ಶ್ರೀ ಭುವನೇಂದ್ರ ಕಾಲೇಜು ಪ್ರಾಂಶುಪಾಲ ಮಂಜುನಾಥ ಕೋಟ್ಯಾನ್ ಹೇಳಿದರು.
ಯಕ್ಷ ರಂಗಾಯಣ ಕಾರ್ಕಳ ವತಿಯಿಂದ ಕೋಟಿ ಚೆನ್ನಯ ಥೀಂ ಪಾರ್ಕ್ ಆವರಣದಲ್ಲಿ ಕತೆ ಕತೆ ಕಾರಣ ಅಭಿನಯ ಹಿನ್ನ್ನೆಲೆಯಾಗಿ ಕಥೆ ಹೇಳುವ ಕೇಳುವ ಕಮ್ಮಟದಲ್ಲಿ ಮಾತನಾಡಿದರು.

ಕಾರ್ಕಳದ ವಿವಿಧ ಪದವಿ ಕಾಲೇಜಿನ ಆಯ್ದ 38 ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಬಿ.ಆರ್.ವೆಂಕಟರಮಣ ಐತಾಳ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಚಂದ್ರನಾಥ ಬಜಗೋಳಿ ಮತ್ತು ಜ್ಯೋತಿ ಗುರುಪ್ರಸಾದ್ ಮಾತನಾಡಿದರು. ಯಕ್ಷ ರಂಗಾಯಣದ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ಸ್ವಾಗತಿಸಿ, ವಸಂತ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net